ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ವರಿಷ್ಠರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ: ಧರಂಸಿಂಗ್ (BJP | Dharama singh | Congress | Yeddyurappa | Land scam | ESI)
Bookmark and Share Feedback Print
 
ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗಿಳಿಸಲು ಮುಂದಾಗದ ಬಿಜೆಪಿ ಕೇಂದ್ರ ನಾಯಕರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಧರಂಸಿಂಗ್ ಆರೋಪಿಸಿದ್ದಾರೆ.

ಕೇಂದ್ರದಲ್ಲಿ 2ಜಿ ಸ್ಪೆಕ್ಟ್ರಂ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಸದನ ಸಮಿತಿ ವಿಚಾರಣೆಗೆ ಆಗ್ರಹಿಸುವ ಬಿಜೆಪಿ ಕೇಂದ್ರ ನಾಯಕರು ಕರ್ನಾಟಕದ ಬಿಜೆಪಿ ಸರಕಾರದಲ್ಲಿ ಇಷ್ಟೊಂದು ಹಗರಣ ಹೊರಬಂದರೂ ಕಣ್ಣುಮುಚ್ಚಿ ಕುಳಿತಿದ್ದಾರೆ. ಕೇಂದ್ರದಲ್ಲಿನ ಪ್ರಕರಣದ ವಿಚಾರಣೆಗೆ ಆಗ್ರಹಿಸುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

ಈ ಕುರಿತು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಧರಂಸಿಂಗ್, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಕಣ್ಣಿಗೆ ಕಾಣುವ ಕೆಲಸ ಏನು ಮಾಡಿದ್ದಾರೆ ? ನಮ್ಮ ಸರಕಾರದ ಅವಧಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ, ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಮಾಡಿದ್ದು, ಖರ್ಗೆಯವರು 900 ಕೋಟಿ ರೂ. ಇಎಸ್ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತಂದಿದ್ದಾರೆ. ಈ ರಾಜ್ಯ ಸರಕಾರ ಏನು ಮಾಡಿದೆ ಎಂದು ಪ್ರಶ್ನಿಸಿದರು.

ಮೀಸಲಾತಿ ಗೊಂದಲದ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ಕೊಡಲಿಪೆಟ್ಟು ನೀಡಲಾಗಿದೆ. ವಿಕೇಂದ್ರೀಕರಣದ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ