ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಂಗಾರಪ್ಪ ಜೆಡಿಎಸ್ ಸೇರಿದ್ರೆ 'ಕೈ'ಗೆ ಹಾನಿ ಇಲ್ಲ: ಧರಂಸಿಂಗ್ (Bangarappa | JDS | KPCC | Congress | Dharam singh)
Bookmark and Share Feedback Print
 
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಜೆಡಿಎಸ್ ಸೇರಿದರೂ ಕಾಂಗ್ರೆಸ್ ಪಕ್ಷಕ್ಕೆ ಹಾನಿ ಇಲ್ಲ ಎಂದು ಸಂಸದ ಎನ್.ಧರಂಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಬಂಗಾರಪ್ಪ ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಹೋಗುತ್ತಿರುವುದು ಇದೇ ಮೊದಲಲ್ಲ. ಹೀಗಾಗಿ ಅವರು ಪಕ್ಷ ಬಿಡುತ್ತಾರೆ ಎಂದರೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವೂ ಇಲ್ಲ ಎಂದು ತಿಳಿಸಿದರು.

ಹಾಗೆ ನೋಡಿದರೆ ಬಂಗಾರಪ್ಪನವರನ್ನು ಬೆಳೆಸಿದ್ದು ಕಾಂಗ್ರೆಸ್ ಪಕ್ಷ. ಎಲ್ಲ ಅಧಿಕಾರ ಅನುಭವಿಸಿ ಈಗ ಬೇರೆ ಪಕ್ಷಕ್ಕೆ ಹೋಗುವುದು ತರವಲ್ಲ. ಹೋದರೂ ಪರವಾಗಿಲ್ಲ. ಕಾಂಗ್ರೆಸ್ ಸಮುದ್ರ ಇದ್ದಂತೆ. ಯಾರು ಬಂದು, ಯಾರೇ ಹೋದರೂ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಧರಂಸಿಂಗ್ ತಿಳಿಸಿದ್ದಾರೆ.

ಬಂಗಾರಪ್ಪ ಪಕ್ಷ ತೊರೆಯುತ್ತಿರುವ ಪ್ರಶ್ನೆಗೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು, ಬಂಗಾರಪ್ಪನವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದಾರೆಂಬ ಸುದ್ದಿ ಇದೆ. ಇದರ ಹಿಂದೆ ಕಾಂಗ್ರೆಸ್‌ಗೆ ಲಾಭ ನಷ್ಟದ ಪ್ರಶ್ನೆ ಇಲ್ಲ. ಬಂಗಾರಪ್ಪ ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಬಂದಿದ್ದಾರೆ. ಈಗ ಬೇರೆ ಪಕ್ಷಕ್ಕೆ ಹೋದರೂ ಕಾಂಗ್ರೆಸ್‌ಗೆ ಹಾನಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ