ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಸೇರುವುದು ಕೇವಲ ವಂದತಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಇಲ್ಲಿನ ಕನಕಾಚಲಪತಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ಸಿದ್ದರಾಮಯ್ಯ ನಮ್ಮೊಂದಿಗೆ ಚರ್ಚಿಸಿಲ್ಲ ಎಂದರು. ಮಾಜಿ ಸಚಿವ ಚೆನ್ನಿಗಪ್ಪ ಹಾಗೂ ಅವರ ಪುತ್ರ ಜೆಡಿಎಸ್ ಸೇರಿ ಆಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಕೂಡ ಜೆಡಿಎಸ್ ಪಾಳಯಕ್ಕೆ ಬರಲಿದ್ದಾರೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತನ್ನ ಸರಕಾರದ ಹಗರಣ ಮುಚ್ಚಿಕೊಳ್ಳಲು ಜೆಡಿಎಸ್ ಅಧಿಕಾರಾವಧಿಯಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದರು. ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಪಕ್ಷ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ, ಅಭ್ಯರ್ಥಿಗಳ ಆಯ್ಕೆ ಶೀಘ್ರ ನಡೆಯಲಿದೆ ಎಂದರು.