ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ತಿಳಿಸಿದ್ದಾರೆ.
ಭಾರತಿನಗರಕ್ಕೆ ಖಾಸಗಿ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತಮಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ನೀಡಿರುವುದಕ್ಕೆ ಅಸಮಾಧಾನವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.
'ಶಾಪಗ್ರಸ್ತ' ಚಾಮರಾಜನಗರಕ್ಕೆ ಭೇಟಿ ನೀಡಲು ಅಂಜಿಕೆಯಿಲ್ಲ. ಅಲ್ಲಿನ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವೆ ಎಂದು ತಿಳಿಸಿದರು.
ಭೂ ಹಗರಣದಲ್ಲಿ ಕಾಂಗ್ರೆಸ್ ಮತ್ತು ಜಾ.ದಳ ಹೊರತಲ್ಲ. ಆ ಪಕ್ಷಗಳು ಅಧಿಕಾರದಲ್ಲಿದ್ದಾಗಲೂ ನೂರಾರು ಎಕರೆ ಡಿನೋಟಿಫಿಕೇಷನ್ ಆಗಿದೆ. ಅದನ್ನೆಲ್ಲ ಜನತೆಯ ಮುಂದಿಡುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.