ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಆಪ್ತ ಎಂ.ಡಿ.ಲಕ್ಷ್ಮೀನಾರಾಯಣ ಬಿಜೆಪಿಗೆ ಗುಡ್ ಬೈ (BJP | Yeddyurappa | Somanna | Congress | Election)
Bookmark and Share Feedback Print
 
ಮಹತ್ವದ ಬೆಳವಣಿಗೆಯೊಂದರಲ್ಲಿ ತುಮಕೂರು ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಜಾತಿರಾಜಕಾರಣದ ಒತ್ತಡಕ್ಕೆ ಬೇಸತ್ತು ಮುಖ್ಯಮಂತ್ರಿ ಅವರ ಆತ್ಮೀಯ, ತುರುವೇಕೆರೆ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸಚಿವ ಸೋಮಣ್ಣ ಅವರು ಜಾತಿ ಆಧಾರದ ಮೇಲೆ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಟಿಕೆಟ್ ಹಂಚುವಂತೆ ಒತ್ತಡ ಹೇರಿದ್ದರು. ಆ ನಿಟ್ಟಿನಲ್ಲಿ ತಾನು ಬಿಜೆಪಿಗೆ ಹಾಗೂ ಕೈಮಗ್ಗ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿರುವುದಾಗಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಲಿಂಗಾಯಿತ, ಒಕ್ಕಲಿಗ ಜನಾಂಗದವರ ಪ್ರಾಬಲ್ಯ ಇದ್ದರೂ ಕೂಡ ನಾನು ನೇಕಾರ ಜನಾಂಗ ಸೇರಿದ್ದರೂ ಈವರೆಗೂ ಜಾತಿ ರಾಜಕಾರಣ ಮಾಡಿಲ್ಲ. ಅಲ್ಲದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಒಂದು ಬಾರಿ ಶಾಸಕನಾಗಿಯೂ ಆಯ್ಕೆಯಾಗಿದ್ದೇನೆ. ಆದರೆ ಇದೀಗ ಸೋಮಣ್ಣ ಅವರ ಜಾತಿರಾಜಕಾರಣದಿಂದ ಬೇಸತ್ತು ಪಕ್ಷದಿಂದ ಹೊರಹೋಗುತ್ತಿರುವುದಾಗಿ ವಿವರಿಸಿದ್ದಾರೆ.

ನಾನು ಯಾವ ಪಕ್ಷಕ್ಕೂ ಸೇರಲ್ಲ, ಪಕ್ಷಕ್ಕಾಗಿ ಈಗಾಗಲೇ ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದೇನೆ. ಅಧಿಕಾರದ ಆಸೆಯೂ ನನಗಿಲ್ಲ ಎಂದು ಲಕ್ಷ್ಮೀನಾರಾಯಣ ಸ್ಪಷ್ಟಪಡಿಸಿದ್ದಾರೆ.

ನಾನು ಹಸ್ತಕ್ಷೇಪ ಮಾಡಿಲ್ಲ-ಸೋಮಣ್ಣ: ಪಂಚಾಯ್ತಿ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಜಾತಿ ರಾಜಕಾರಣ ಮಾಡಿದ್ದೇನೆ ಎಂಬ ಲಕ್ಷ್ಮೀನಾರಾಯಣ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ನಾನು ಇಂತಹವರಿಗೇ ಸೀಟು ಕೊಡಿ ಅಂತ ಯಾರ ಮೇಲೂ ಒತ್ತಡ ಹೇರಿಲ್ಲ. ಲಕ್ಷ್ಮೀನಾರಾಯಣ ಅವರು ಹಿರಿಯ ರಾಜಕಾರಣಿ, ಸ್ವಾರ್ಥಕ್ಕಾಗಿ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದರು.

ಅವರಿಗೆ ಇಷ್ಟ ಬಂದವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೇನೆ. ಈ ಬಗ್ಗೆ ಜಿಲ್ಲಾಧ್ಯಕ್ಷರನ್ನು ಬೇಕಾದರೆ ಕೇಳಿ. ನನ್ನಿಂದ ಯಾರಿಗೂ ಮುಜುಗರ ಆಗುವಂತಹ ಕೆಲಸ ಮಾಡಿಲ್ಲ ಎಂದು ಸೋಮಣ್ಣ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ