ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಗೆ ನೆಲೆಯಿಲ್ಲ, ಕಾಂಗ್ರೆಸ್‌ ಪಕ್ಷ ಸೇರಿ: ಡಿ.ಕೆ.ಶಿವಕುಮಾರ್ (BJP | Shivkumar | Congress | Kumaraswamy | JDS)
Bookmark and Share Feedback Print
 
ಕನಕಪುರದಲ್ಲಿ ಬಿಜೆಪಿಗೆ ನೆಲೆಯಿಲ್ಲ, ಅಧಿಕಾರ ಪಡೆಯುವುದಂತೂ ಕಷ್ಟ, ನಿಷ್ಠಾವಂತ ಕಾರ್ಯಕರ್ತರು ಅವಕಾಶ ದೊರೆಯದೆ ತೊಳಲಾಡುತ್ತಿದ್ದಾರೆ. ಹಾಗಾಗಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬನ್ನಿ ಎಂದು ಶಾಸಕ, ಕೆಪಿಪಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಅವರು ಕನಕಪುರ ಕೋಟೆ ಗಣೇಶನ ದೇವಾಲಯದಲ್ಲಿ ಬಿಜೆಪಿಯ 13 ಯುವ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ವಿ.ಶ್ರೀನಿವಾಸ್, ಡಿಕೆಶಿ ಅವರ ನಾಯಕತ್ವ ಒಪ್ಪಿ, ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಪ್ರಗತಿಪರವಾಗಿ ಜನಪರವಾಗಿ ಚಿಂತಿಸುವ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಹೇಳಿದರು.

ಇತ್ತೀಚೆಗೆ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ, ಪಿಜಿಆರ್ ಸಿಂಧ್ಯಾ ಅವರು ಮಾಧ್ಯಮಗಳಲ್ಲಿ ಡಿ.ಕೆ.ಶಿವಕುಮಾರ್ ಅವರ ಪತನವೇ ತಮ್ಮ ಗುರಿ ಎಂದು ಹೇಳಿಕೆಯನ್ನಿತ್ತಿದ್ದಾರೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುತ್ತಿದ್ದೇನೆ. ಧರ್ಮ ಯುದ್ಧಕ್ಕೆ ಸನ್ನದ್ಧನಾಗಿದ್ದೇನೆ, ಜೆಡಿಎಸ್ ವಿರುದ್ಧ ಹೋರಾಟ ನಡೆಸಲು ರಣವೀಳ್ಯ ಸ್ವೀಕರಿಸುತ್ತಿದ್ದೇನೆ ಎಂದು ಡಿಕೆಶಿ ಸವಾಲು ಹಾಕಿದರು.
ಸಂಬಂಧಿತ ಮಾಹಿತಿ ಹುಡುಕಿ