ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೀಘ್ರದಲ್ಲೇ ರಾಜ್ಯ ಸರಕಾರ ಪತನ: ಎಚ್‌ಡಿಕೆ ಮತ್ತೆ ಭವಿಷ್ಯ (Kumaraswamy | BJP | JDS | Congress | Deve gowda)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾವು ಮಾಡಿದ ಸ್ವಯಂಕೃತ ಅಪರಾಧದಿಂದಲೇ ಸ್ಥಾನ ಕಳೆದುಕೊಂಡು ಪಶ್ಚಾತ್ತಾಪ ಪಡುವ ಕಾಲ ದೂರವಿಲ್ಲ, ಇನ್ನೊಂದು ತಿಂಗಳಲ್ಲಿ ಸರಕಾರ ಪತನವಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ.

ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿ.ಪಂ, ತಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಪಡೆಯುವುದು ಖಚಿತ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸಾಧನೆಯ ಬಗ್ಗೆ ಜನರ ಮುಂದೆ ಡೋಂಗಿ ಹೊಡೆಯುತ್ತಿದ್ದಾರೆ. ಜನ ಇದನ್ನು ನಂಬುವುದಿಲ್ಲ ಎಂದರು.

ರಾಜ್ಯದಲ್ಲಿ ಭ್ರಷ್ಟಾಚಾರ, ಭೂ ಹಗರಣ ಹೆಚ್ಚಾಗಿದ್ದು, ಭ್ರಷ್ಟಾಚಾರದಲ್ಲಿ ಬಿಜೆಪಿ ನಂ.1 ಸ್ಥಾನ ಪಡೆದಿದೆ. ಇಂತಹ ಭ್ರಷ್ಟ ಸರಕಾರದ ವಿರುದ್ಧ ಜೆಡಿಎಸ್ ಸಮರ ಸಾರಲಿದೆ ಎಂದ ಅವರು, ಇನ್ನಷ್ಟು ಹಗರಣಗಳು ನಡೆಯಲು ಯಾವುದೇ ಕಾರಣಕ್ಕೂ ತಾವು ಬಿಡುವುದಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ನಾಲಾಯಕ್ ಮುಖ್ಯಮಂತ್ರಿ. ಇವರಿಗೆ ಆಡಳಿತ ನಡೆಸಲು ಬರುವುದಿಲ್ಲ. ಸ್ವಜನ ಪಕ್ಷಪಾತದಲ್ಲಿ ತೊಡಗಿರುವ ಮುಖ್ಯಮಂತ್ರಿಗಳು ಮುಂಬರುವ ದಿನಗಳಲ್ಲಿ ಪಶ್ಚಾತ್ತಾಪ ಪಡುವುದು ಖಚಿತ ಎಂದರು.
ಸಂಬಂಧಿತ ಮಾಹಿತಿ ಹುಡುಕಿ