ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಪಾಲರೇ ಪ್ರತಿಪಕ್ಷದ ನಾಯಕ: ಈಶ್ವರಪ್ಪ
ವಾಗ್ದಾಳಿ (Panchayat Elections | Eshwarappa K S | Hansraj Bharadwaj | Governor | Karnataka | Opposition Leader)
ವಿರೋಧ ಪಕ್ಷದಲ್ಲಿ ಸಮರ್ಥ ನಾಯಕರೇ ಇಲ್ಲ. ಹೀಗಾಗಿ ಆ ಕೆಲಸವನ್ನು ರಾಜ್ಯಪಾಲರು ನಿಭಾಯಿಸುತ್ತಿದ್ದಾರೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ರಾಜ್ಯಪಾಲರು ಪ್ರತಿಪಕ್ಷ ನಾಯಕನಂತೆ ವರ್ತಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಾ ಮಾತನಾಡಿದ ಅವರು, ರಾಜ್ಯದಲ್ಲಿ ಭೂಹಗರಣ ಮತ್ತು ಭ್ರಷ್ಟಾಚಾರ ಆರೋಪಗಳ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಇದೇನೂ ಹೊಸ ವಿಷಯವೇನಲ್ಲ, ರಾಜ್ಯಪಾಲರು ಮೊದಲಿನಿಂದಲೂ ವಿರೋಧ ಪಕ್ಷದ ಸ್ಥಾನದಿಂದಲೇ ಮಾತನಾಡುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್ ನಾಯಕರಿಗಿಂತ ಅವರೇ ಹೆಚ್ಚು ಸದ್ದು ಮಾಡುತ್ತಿದ್ದಾರೆ ಎಂದು ಕೆಂಡಾಮಂಡಲವಾಗಿ ನುಡಿದರು.
ಚುನಾವಣೆಗಳಲ್ಲಿ ಕಾಂಗ್ರೆಸ್ಸನ್ನು ಜನತೆ ತಿರಸ್ಕರಿಸುತ್ತಾರೆ ಎಂದು ನುಡಿದ ಅವರು, ಪ್ರತಿಪಕ್ಷಗಳ ಅಸಹಕಾರ ಆಂದೋಲನದ ಹೊರತಾಗಿಯೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ನಾವು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದೇವೆ ಎಂದರು.