ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜೆಡಿಎಸ್ ಸೋಲಿಸಲು ಬಿಜೆಪಿ-ಕಾಂಗ್ರೆಸ್ ಒಪ್ಪಂದ: ಎಚ್‌ಡಿಕೆ (JDS | Congress | BJP | Yeddyurappa | Kumaraswamy | Election)
Bookmark and Share Feedback Print
 
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಸಮೀಪ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಆಡಳಿತಾರೂಢ ಬಿಜೆಪಿ ಜತೆ ಕಾಂಗ್ರೆಸ್ಸಿಗರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಾಯಲ್ಲಿ ಭಗವದ್ಗೀತೆ ಬರುವುದಿಲ್ಲ ಎಂದು ಕುಮಾರಸ್ವಾಮಿ ಹೇಳುವ ಮೂಲಕ ಬಿಜೆಪಿ ಹಗಲು ಪ್ರಚಾರ ನಡೆಸಿ ಮತ ಕೇಳುತ್ತಿದ್ದರೆ, ರಾತ್ರಿ ವೇಳೆ ವಿಪಕ್ಷಗಳು ಹಣ-ಹೆಂಡ ಹಂಚಿ ಮತ ಯಾಚಿಸುತ್ತಿದ್ದಾರೆ ಎಂಬ ಸಿಎಂ ಆರೋಪಕ್ಕೆ ತಿರುಗೇಟು ನೀಡಿದರು.

ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಕೂಡ ವಿಪಕ್ಷಗಳ ಮೇಲೆ ವಾಗ್ದಾಳಿ ನಡೆಸುವ ಮುಖ್ಯಮಂತ್ರಿಗಳಿಗೆ ನೈತಿಕ ಶಕ್ತಿಯೇ ಇಲ್ಲದಂತಾಗಿದೆ. ಹಾಗಾಗಿ ವಾಮ ಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೊರಟಿದ್ದಾರೆ ಎಂದು ದೂರಿದರು. ಅದಕ್ಕಾಗಿಯೇ ಚುನಾವಣೆಯಲ್ಲಿ ಮತದಾರರಿಗೆ ಹೆಂಡ, ಹಣ ಹಂಚಲು ಪೊಲೀಸ್ ವ್ಯಾನ್ ಬಳಸುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ನಾಯಕರು ತುಮಕೂರಿನಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮದ್ಯ ಸಾಗಿಸುವಾಗ ಸಿಕ್ಕಿ ಬಿದ್ದಿದ್ದಾರೆ. ಇನ್ನಾದರೂ ಮುಖ್ಯಮಂತ್ರಿಗಳು ವಿಪಕ್ಷಗಳ ಮೇಲೆ ಆರೋಪ ಮಾಡುವ ಮುನ್ನ ಎಚ್ಚರಿಕೆ ವಹಿಸಲಿ ಎಂದು ಸಲಹೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ