ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 22 ಜಿ.ಪಂ. ಬಿಜೆಪಿ ತೆಕ್ಕೆಗೆ: ಸಚಿವ ಸುರೇಶ್ ಕುಮಾರ್ (BJP | Suresh kumar | Yeddyurappa | Election | Congress)
Bookmark and Share Feedback Print
 
ಮುಂಬರುವ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಕನಿಷ್ಠ 22 ಜಿ.ಪಂ.ಗಳನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಲ್ಲಿಗೆ ಖಾಸಗಿ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಲಿದೆ ಎಂದರು. ಭೂ ಮತ್ತು ಗಣಿಹಗರಣ ಕುರಿತು ರಾಜ್ಯಪಾಲರ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ವಿಪಕ್ಷಗಳ ಹಗರಣದ ಮಾಹಿತಿಯನ್ನು ಮಾಧ್ಯಮದ ಮೂಲಕ ಜನತೆಗೆ ಈಗಾಗಲೇ ತಿಳಿಸಿದ್ದೇವೆ. ದತ್ತಾತ್ರೇಯ ಪೀಠದಲ್ಲಿ ಸೋಮವಾರದಿಂದ ಪಾದುಕೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಕೋಮು ಸಂಘರ್ಷಕ್ಕೆ ಅವಕಾಶ ಆಗದಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಉತ್ತಮ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ