ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಪಾಲರು ಬಿಜೆಪಿ ಮುಖಂಡರಿಂದ ಕಲಿಯಬೇಕಾಗಿಲ್ಲ: ದೇವೇಗೌಡ (Deve gowda | BJP | Yeddyurappa | Bharadwaj | JDS)
Bookmark and Share Feedback Print
 
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಬಿಜೆಪಿ ಮುಖಂಡರಿಂದ ಸಂವಿಧಾನದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹತ್ತಾರು ವರ್ಷ ಕಾನೂನು ಸಚಿವರಾಗಿದ್ದ ರಾಜ್ಯಪಾಲರಿಗೆ ಸಂವಿಧಾನದ ಪೂರ್ಣ ಅರಿವು ಇದೆ. ಅಂತಹವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದರು.

ಅಕ್ರಮ ಗಣಿಗಾರಿಗೆ, ಭೂ ಹಗರಣ ಸಂಬಂಧ ರಾಜ್ಯಪಾಲರಿಗೆ ಸಿಎಂ ಏನೇನು ವಿವರ ನೀಡಿ ಪತ್ರ ಬರೆದಿದ್ದಾರೋ ತಿಳಿದಿಲ್ಲ. ಸಮಂಜಸ ಉತ್ತರ ನೀಡಿದ್ದರೆ ರಾಜ್ಯಪಾಲರು ತೃಪ್ತರಾಗುತ್ತಾರೆ ಅಷ್ಟೇ ಎಂದು ಪ್ರತಿಕ್ರಿಯಿಸಿದರು.

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರಕಾರದ ವಿರುದ್ಧ ಜನತಾ ಪರಿವಾರದ ಮುಖಂಡರು ಒಂದಾಗಬೇಕೆಂದು ಬಯಸಿ ಪಕ್ಷದಿಂದ ಹೊರ ಹೋದವರು ಮರಳಿ ಬನ್ನಿ ಎಂದಿದ್ದೇವೆ. ಬರುವವರನ್ನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಕ್ಷಕ್ಕೆ ಬಂದ ಎಲ್ಲರಿಗೂ ಒಂದೇ ಸಲ ಅಧಿಕಾರ ನೀಡಲು ಸಾಧ್ಯವಿಲ್ಲ. ಜೆಡಿಎಸ್ ಬಲಪಡಿಸಲು ಸಹಕಾರ ನೀಡಬೇಕು ಎಂದರು.

ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗುತ್ತದೆಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಸ್ಪಷ್ಟ ಉತ್ತರ ನೀಡಲು ಗೌಡರು ನಿರಾಕರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ