ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸೋನಿಯಾ, ರಾಹುಲ್ ಗಿಮಿಕ್ ಪ್ರಭಾವ ಬೀರುತ್ತಿಲ್ಲ: ಬಿಜೆಪಿ (Sonia gandhi | Rahul gandhi | BJP | Congress | Ananth kumar)
Bookmark and Share Feedback Print
 
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ದೇಶದಲ್ಲಿ ಎಷ್ಟೇ ತಿಪ್ಪರಲಾಗ ಹಾಕಿದರೂ ಅವರ ಆಟ ನಡೆಯುತ್ತಿಲ್ಲ. ಅದಕ್ಕೆ ಇತ್ತೀಚೆಗೆ ನಡೆದ ಬಿಹಾರ ಚುನಾವಣೆಯೇ ಸಾಕ್ಷಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಟೀಕಿಸಿದ್ದಾರೆ.

ಮಹದೇವಪುರದ ಅವಲಹಳ್ಳಿಯಲ್ಲಿ ಸೋಮವಾರ ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಯ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಕ್ಷೇತ್ರದಲ್ಲಿ ಕಳೆದ ಐವತ್ತು ವರ್ಷಗಳಲ್ಲಿ ಆಗದಷ್ಟು ಈ ವರ್ಷದಲ್ಲಿ ಆಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಪ್ರಮುಖ ಆದ್ಯತೆ ನೀಡುತ್ತ ಬಂದಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಅಲ್ಲದೇ ಕ್ಷೇತ್ರದ ಅಭಿವೃದ್ಧಿಗೆ ಸುಮಾರು 120 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ