ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಅಧಿಕ ಸೀಟು ಪಡೆದ್ರೆ ತಲೆ ಬೋಳಿಸಿಕೊಳ್ತೇನೆ: ಜಮೀರ್ ಸವಾಲು (BJP | Jamie ahamad | Congress | Yeddyurappa | JDS | HDK)
Bookmark and Share Feedback Print
 
ರಾಜ್ಯದ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಶೇಕಡಾ 60ರಷ್ಟು ಸ್ಥಾನಗಳಲ್ಲಿ ಗೆಲವು ಸಾಧಿಸಿದರೆ ತಲೆ ಬೋಳಿಸಿಕೊಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆ ಗೇಟು ಕಾಯುತ್ತೇನೆ ಎಂದು ಮಾಜಿ ಮಂತ್ರಿ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಶೇ.60ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿಕೊಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭ್ರಮಾಲೋಕದಲ್ಲಿ ವಿಹರಿಸುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.

ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಭೀಮಳ್ಳಿ ಸೇರಿದಂತೆ ನಾನಾ ಕಡೆ ಪ್ರಚಾರ ನಡೆಸಿದ ನಂತರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಶೇಕಡಾ 60ರಷ್ಟು ಸ್ಥಾನಗಳು ಸಿಗಲ್ಲ. ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಸರಕಾರವನ್ನು ಜನರು ನೆನೆಸಿಕೊಳ್ಳುತ್ತಿದ್ದಾರೆ. ಬಿಜೆಪಿ ಜನರ ನಂಬಿಕೆಗೆ ಮೋಸ ಮಾಡಿದೆ. ಹೀಗಾಗಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು ಗುಡುಗಿದರು. ಬೀದರ್ ಮತ್ತು ಗುಲ್ಬರ್ಗ ಜಿಲ್ಲೆಯಲ್ಲಿ ಪ್ರವಾಸ ಮಾಡಿದಾಗ ಜೆಡಿಎಸ್ ಪರ ಉತ್ತಮ ಅಲೆ ಕಂಡು ಬಂದಿದೆ ಎಂದರು. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಶೀಘ್ರವೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಜಮೀರ್ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ