ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವರ್ನರ್ ಭಾರದ್ವಾಜ್ ವಿರುದ್ಧ ರಾಷ್ಟ್ರಪತಿಗೆ ದೂರು: ಬಿಜೆಪಿ (BJP | Bharadwaj | Congress | Yeddyurappa | Ishwarappa)
Bookmark and Share Feedback Print
 
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಪ್ರತಿಪಕ್ಷದ ನಾಯಕರಂತೆ ವರ್ತಿಸುತ್ತಿರುವುದಾಗಿ ಆರೋಪಿಸಿರುವ ಬಿಜೆಪಿ, ಅವರ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ರಾಜ್ಯ ನಾಯಕರು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ದೂರು ಸಲ್ಲಿಸುವುದಾಗಿ ಬಿಜೆಪಿ ಹೇಳಿದೆ.

ಅಲ್ಲದೇ ರಾಜ್ಯಪಾಲ ಭಾರದ್ವಾಜ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದು, ರಾಜ್ಯಪಾಲರು ರಾಜ್ಯಪಾಲರಂತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಸಂವಿಧಾನಿಕ ಕರ್ತವ್ಯ ಮರೆತು ಪ್ರತಿಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಹಾಗೂ ಮೋಟಮ್ಮ ಅವರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಮನಗರ ಜಿಲ್ಲೆಯಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಕೈಗೊಂಡಿದ್ದ ಅವರು ಸುದ್ದಿಗಾರರ ಜತೆ ಮಾತನಾಡುತ್ತ, ಬಳ್ಳಾರಿಯ ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆ ನಡೆಸಿರುವುದು ಸಾಬೀತಾದರೆ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಚಿವ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಕಂಪನಿ ಕರ್ನಾಟಕದಲ್ಲಿ ಗಣಿಗಾರಿಕೆ ನಡೆಸುತ್ತಿಲ್ಲ. ಈ ಕಂಪನಿ ಆಂಧ್ರಪ್ರದೇಶದಲ್ಲಿ ಗಣಿಗಾರಿಕೆಯಲ್ಲಿ ತೊಡಗಿದೆ. ಈ ಕಂಪನಿಯ ವ್ಯವಹಾರದ ಬಗ್ಗೆ ಕೇಂದ್ರ ಸಿಬಿಐ ತನಿಖೆಗೆ ಆದೇಶಿಸಿದೆ. ಸಿಬಿಐ ತನಿಖೆ ಮುಗಿದ ನಂತರ ತಪ್ಪಿತಸ್ಥರೆಂದು ಸಾಬೀತಾದರೆ ಶಿಕ್ಷೆ ಅನುಭವಿಸಲಿದ್ದಾರೆ ಎಂದು ಹೇಳಿದರು.

ರಾಜ್ಯಪಾಲರು ದಿನಕ್ಕೊಂದರಂತೆ ಹೊಸ ಕ್ಯಾತೆ ತೆಗೆದು ಪ್ರಚಾರ ಪಡೆಯುತ್ತಿದ್ದಾರೆ ಎಂದು ದೂರಿದರು. ರಾಜ್ಯಪಾಲರು ಅನಗತ್ಯ ಕ್ಯಾತೆ ತೆಗೆಯುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ