ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಕ್ಷ ಕಟ್ಟಿ ರಾಷ್ಟ್ರ ರಾಜಕಾರಣಕ್ಕೆ ತೆರಳುವೆ: ಯಡಿಯೂರಪ್ಪ ಘೋಷಣೆ (BJP | Yeddyurappa | Central Politics | Congress | JDS)
Bookmark and Share Feedback Print
 
PTI
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲಿಸಿ, ರಾಷ್ಟ್ರ ರಾಜಕಾರಣಕ್ಕೆ ತೆರಳುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯರಾಜಕಾರಣಕ್ಕೆ ಗುಡ್ ಬೈ ಹೇಳುವ ಮುನ್ಸೂಚನೆ ನೀಡಿದ್ದಾರೆ.

ಬುಧವಾರ ಶಿಕಾರಿಪುರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಸದೃಢವಾಗಿ ಕಟ್ಟಿ ರಾಷ್ಟ್ರರಾಜಕಾರಣದತ್ತ ತೆರಳುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಆದರೆ ಮುಂದಿನ ಎರಡೂವರೆ ವರ್ಷಗಳ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲಿಸುವ ಇಚ್ಛೆ ಹೊಂದಿದ್ದೇನೆ. ಹಾಗಾಗಿ ರಾಜ್ಯ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ
ರಾಜ್ಯ ರಾಜಕಾರಣದಿಂದ ರಾಷ್ಟ್ರರಾಜಕಾರಣಕ್ಕೆ ಹೋಗುವುದಾಗಿ ಹೇಳಿದರು.

ಮುಂದಿನ ಇಪ್ಪತ್ತು ವರ್ಷಗಳ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿಯಾಗಿ ಇರುತ್ತೇನೆ. ಕಾಂಗ್ರೆಸ್, ಜೆಡಿಎಸ್ ಪ್ರತಿಪಕ್ಷ ಸ್ಥಾನದಲ್ಲಿಯೇ ಇರಬೇಕಾಗುತ್ತದೆ ಎಂದು ತಿರುಗೇಟು ನೀಡುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ಅಲ್ಲದೇ ಮುಖ್ಯಮಂತ್ರಿ ಸ್ಥಾನ ತೊರೆಯಬೇಕಾದ ಅನಿವಾರ್ಯ ಸ್ಥಿತಿ ಎದುರಾಗುವ ಭೀತಿಯಿಂದ ರಾಷ್ಟ್ರ ರಾಜಕಾರಣಕ್ಕೆ ತೆರಳುವುದಾಗಿ ಹೇಳಿಕೆ ನೀಡಿದ್ದಾರೋ ಅಥವಾ ರಾಜಕೀಯ ತಂತ್ರಗಾರಿಕೆಯ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೋ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟು ಹಾಕಿದೆ.
ಸಂಬಂಧಿತ ಮಾಹಿತಿ ಹುಡುಕಿ