ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯವ್ಯಾಪಿ ಕಾಂಗ್ರೆಸ್ ಅಲೆ ಇದೆ: ಮಲ್ಲಿಕಾರ್ಜುನ ಖರ್ಗೆ (Mallikarhuna kharghe | BJP | Congress | Election | JDS)
Bookmark and Share Feedback Print
 
ಬಿಜೆಪಿ ಸರಕಾರದಲ್ಲಿನ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದು, ರಾಜ್ಯವ್ಯಾಪಿ ಕಾಂಗ್ರೆಸ್ ಅಲೆ ಇದೆ. ಹೀಗಾಗಿ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಹುತೇಕ ಕಡೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸವ್ಯಕ್ತಪಡಿಸಿದರು.

ಯುವಕರು ಮತ್ತು ವಿದ್ಯಾವಂತರಿಗೆ ಹೆಚ್ಚಿನ ಅವಕಾಶ ನೀಡಿರುವುದರಿಂದ ಕಾಂಗ್ರೆಸ್ ಬಹುತೇಕ ಕಡೆ ಗೆಲುವು ಸಾಧಿಸಲಿದೆ ಎಂದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಖರ್ಗೆ, ಬಿಜೆಪಿಯಲ್ಲಿರುವ ಹಣ ಮತ್ತು ತೋಳ್ಬಲ ಕಾಂಗ್ರೆಸ್‌ನಲ್ಲಿ ಇಲ್ಲ. ಆದರೆ ವಿದ್ಯಾವಂತ ಯುವಕರಿದ್ದಾರೆ. ಕಾಂಗ್ರೆಸ್‌ನಲ್ಲಿರುವ ಈ ಶಕ್ತಿ ಬಿಜೆಪಿಯಲ್ಲಿ ಇಲ್ಲ. ಹೀಗಾಗಿ ಈ ಬಾರಿ ಬಿಜೆಪಿ ಹಿಂದಿಕ್ಕುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.

ವಿಶೇಷವಾಗಿ ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಯಲ್ಲಿನ ಅಭ್ಯರ್ಥಿಗಳು 45 ವರ್ಷದೊಳಗಿನವರೇ ಇದ್ದು, ಬಹುತೇಕ ಜನ ವಿದ್ಯಾವಂತರೂ ಆಗಿದ್ದಾರೆ. ಹೀಗಾಗಿ ಈ ಚುನಾವಣೆ ಸೋಲಿನ ಭಯದಲ್ಲಿರುವ ಬಿಜೆಪಿ ಹಣ ಮತ್ತು ಹೆಂಡ ಹಂಚಿಕೆ ಶುರು ಮಾಡಿದೆ ಎಂದು ದೂರಿದರು.

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನದಲ್ಲಿ ಕರ್ನಾಟಕ ಸಂಪೂರ್ಣ ವಿಫಲವಾಗಿದೆ. ಈ ಯೋಜನೆ ಅಡಿ ನಡೆದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಈ ಯೋಜನೆ ಕುರಿತು ಕೇಂದ್ರ ಸರಕಾರ ಇತ್ತೀಚೆಗೆ ನಡೆಸಿದ ಪ್ರಗತಿ ಪರಿಶೀಲನೆಯಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳು ಅತ್ಯಂತ ಹಿಂದುಳಿದಿವೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ