ಜಿಲ್ಲಾ ಪಂಚಾಯಿತಿ ಮತ್ತು ತಾ.ಪಂ ಚುನಾವಣೆಯ ಫಲಿತಾಂಶದ ನಂತರ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯಪಾಲರು ಸರಕಾರದ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ.ಆದ್ದರಿಂದ ಚುನಾವಣೆಯ ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಲು ನಿರ್ಧರಿಸಿರಿುವುದಾಗಿ ತಿಳಿಸಿದ್ದಾರೆ.
ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಜನತೆ ರಾಜ್ಯದ ಪರವಾಗಿ ಮತ ಚಲಾಯಿಸುವುದು ಖಚಿತ. ಚುನಾವಣೆ ಫಲಿತಾಂಶ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದೆ. ಸರಕಾರದ ವಿರುದ್ಧದ ಆರೋಪಗಳಿಗೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿದ್ದಾರೆ.
ರಾಷ್ಟ್ರ ರಾಜಕಾರಣ ಪ್ರವೇಶಿಸುವ ಕುರಿತಂತೆ,ಬಿಜೆಪಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಹೈಕಮಾಂಡ್ ನೀಡಿದ ಸೂಚನೆಯನ್ನು ಪಾಲಿಸುತ್ತೇನೆ ಎಂದು ತಿಳಿಸಿದ್ದಾರೆ.
2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಅನಾವಶ್ಯಕವಾಗಿ ಬಿಜೆಪಿ ನಾಯಕರನ್ನು ಸಿಲುಕಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ.ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಬಹಿರಂಗವಾಗಲಿದೆ ಎಂದು ಅನಂತ್‌ಕುಮಾರ್ ಅವರನ್ನು ಸಮರ್ಥಿಸಿಕೊಂಡರು.