ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೆಂಗಳೂರು: ಒಂದೇ ಮನೆಯಲ್ಲಿ 33 ಮಂದಿ ನಕಲಿ ಮತದಾರರು! (Congress | BJP | JDS | Election | KPCC | Election Commission)
Bookmark and Share Feedback Print
 
ಯಲಹಂಕದ ಬಿಜೆಪಿ ಶಾಸಕ ವಿಶ್ವನಾಥ್ ಪತ್ನಿ ವಾಣಿಶ್ರೀ ಸ್ಪರ್ಧಿಸಿರುವ ಸಿಂಗನಾಯಕನಹಳ್ಳಿ ಜಿಲ್ಲಾ ಪಂಚಾಯ್ತಿ ಕ್ಷೇತ್ರದ ಒಂದೇ ಮನೆಯಲ್ಲಿ 33 ನಕಲಿ ಮತದಾರರನ್ನು ಸೃಷ್ಟಿಸಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗ ಹಾಗೂ ಸರಕಾರವನ್ನು ಒತ್ತಾಯಿಸಿದೆ.

ನಕಲಿ ಮತದಾರರನ್ನು ಸೃಷ್ಟಿಸಲು ನೆರವಾದ ಅಧಿಕಾರಿಗಳನ್ನು ಅಮಾನತಿನಲ್ಲಿಡುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ಜಿ.ಸಿ.ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಕಳೆದ ಒಂದು ತಿಂಗಳ ಹಿಂದೆ ನಕಲಿ ಮತದಾರರನ್ನು ಸೇರಿಸಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ಜಿಲ್ಲಾಧಿಕಾರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದರು.

ಆ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಎರಡನೇ ಹಂತದ ಚುನಾವಣೆಯಲ್ಲಿಯೂ ನಕಲಿ ಮತದಾರರನ್ನು ಸೃಷ್ಟಿ ಮಾಡಿರುವ ಶಂಕೆ ಇದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ