ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 2ನೇ ಹಂತದ ಪಂಚಾಯ್ತಿ ಚುನಾವಣೆ ಕೊನೆ ಕಸರತ್ತು; ಪ್ರಚಾರ ಅಂತ್ಯ (BJP | Election | Congress | JDS | Yeddyurappa | Bangalore)
Bookmark and Share Feedback Print
 
ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯ ಮೊದಲ ಹಂತದ ಚುನಾವಣೆಯಲ್ಲಿ ಅಭ್ಯರ್ಥಿಗಳ ಸೋಲು, ಗೆಲುವಿನ ಲೆಕ್ಕಚಾರ ನಡೆಯುತ್ತಿದ್ದರೆ, ಮತ್ತೊಂದೆಡೆ ಎರಡನೆ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಮಂಗಳವಾರ ರಾತ್ರಿ ಮುಕ್ತಾಯಗೊಳ್ಳಲಿದೆ.

ರಾಜ್ಯದ 17 ಜಿಲ್ಲೆಗಳ ಜಿಲ್ಲಾ ಪಂಚಾಯ್ತಿ ಮತ್ತು 2163 ತಾಲೂಕು ಪಂಚಾಯ್ತಿ ಕ್ಷೇತ್ರಗಳಲ್ಲಿ ಅಂತಿಮ ದಿನದ ಪ್ರಚಾರ ಅಬ್ಬರದಿಂದ ನಡೆಯಿತು. ಎರಡನೇ ಹಂತಕ್ಕೆ ಡಿಸೆಂಬರ್ 31ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ.

ಮತದಾನ ಆರಂಭಗೊಳ್ಳುವ 48 ಗಂಟೆ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಳ್ಳಬೇಕು. ಆ ನಿಟ್ಟಿನಲ್ಲಿ ಮಂಗಳವಾರ ರಾತ್ರಿಯೇ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಬೇಕು.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಳಗಾಂ, ಬಿಜಾಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಪ್ಪಳ ಸೇರಿದಂತೆ ಒಟ್ಟು 17 ಜಿಲ್ಲೆಗಳಲ್ಲಿ ಚುನಾವಣೆ ಕಾವೇರಿದೆ. ಬೆಟ್ಟಿಂಗ್ ದಂಧೆ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಅದೇ ರೀತಿ ಹಣದ ಥೈಲಿ, ಹೆಂಡದ ಹೊಳೆ ಹರಿಯತೊಡಗಿದೆ.

ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಮುಂತಾದ ಭಾಗಗಳಲ್ಲಿ ಬಾಜಿ ಕಟ್ಟುವವರ ಸಂಖ್ಯೆ ಹೆಚ್ಚಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬೆಟ್ಟಿಂಗ್ ದಂಧೆ ಜೋರಾಗಿದೆ.

595 ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಲ್ಲಿ 2353 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. 2163 ತಾಲೂಕು ಪಂಚಾಯ್ತಿ ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ. ಚುನಾವಣೆ ನಡೆಯುತ್ತಿರುವ 2161 ತಾಲೂಕು ಪಂಚಾಯ್ತಿ ಕ್ಷೇತ್ರಗಳಲ್ಲಿ 7242 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಎರಡನೇ ಹಂತದ ಚುನಾವಣೆಯಲ್ಲಿ 18,203 ಮತಗಟ್ಟೆಗಳಿದ್ದು, 4036 ಸೂಕ್ಷ್ಮ ಹಾಗೂ 2783 ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ