ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರದ ಮೊತ್ತ 5 ಸಾವಿರ ಕೋಟಿ? (BJP | Yeddyurappa | Land scam | Bharaswaj | Congress)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಐದು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ಕೊಡಬೇಕೆಂದು ಜಸ್ಟೀಸ್ ಲಾಯರ್ ಫೋರಂ ಸದಸ್ಯರಾದ ಸಿರಾಜುದ್ದೀನ್ ಪಾಷಾ ಹಾಗೂ ಎಸ್.ಜಿ.ಬಾಲರಾಜ್ ನಿಯೋಗ ರಾಜಭವನದ ಕದತಟ್ಟಿದೆ.

ಮಂಗಳವಾರ ಇಬ್ಬರು ವಕೀಲರು ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ರಾಜ್ಯಪಾಲರು ಸಿಗದ ಕಾರಣ ಅವರ ಕಾರ್ಯದರ್ಶಿಯವರಿಗೆ, ಮುಖ್ಯಮಂತ್ರಿ ಕುಟುಂಬ ಹಾಗೂ ಮುಖ್ಯಮಂತ್ರಿಯವರು ನಡೆಸಿರುವ ಭ್ರಷ್ಟಾಚಾರದ ಪ್ರಕರಣಗಳನ್ನು ಒಳಗೊಂಡಂತೆ ಒಟ್ಟು 1,700 ಪುಟಗಳ 107 ದೂರುಗಳನ್ನು ನೀಡಿದ್ದಾರೆ.

ಅಲ್ಲದೇ ನೇರವಾಗಿ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ದಾಖಲು ಮಾಡಲು ಅವಕಾಶ ಇಲ್ಲದ ಕಾರಣ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅನ್ವಯ ಮುಖ್ಯಮಂತ್ರಿ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ವಿನಂತಿಸಿಕೊಂಡಿರುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ