ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಪಾಲರ ಜತೆ ರಾಜಿಗೆ ಮುಂದಾದ ಯಡಿಯೂರಪ್ಪ (BJP | Yeddyurappa | JDS | Congress | Bharadwaj)
Bookmark and Share Feedback Print
 
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ದಿಢೀರನೆ ರಾಜಿಗೆ ಮುಂದಾಗಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಅವರಲ್ಲಿ ಮೂಡಿರುವ ತಪ್ಪು ಸಂದೇಹಗಳನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲ 15 ದಿನಕ್ಕೊಮ್ಮೆ ರಾಜ್ಯಪಾಲರನ್ನು ಭೇಟಿಯಾಗಿ ಸಂಘರ್ಷ ಕೊನೆಗಾಣಿಸಲು ನಿರ್ಧರಿಸಿದ್ದಾರೆ. ರಾಜ್ಯಪಾಲರು ಹಿರಿಯರು, ಅನುಭವಿಗಳು, ಸರಕಾರದ ಕಾರ್ಯಚಟುವಟಿಕೆ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ. ಅವರಿಂದ ಮಾರ್ಗದರ್ಶನ ಪಡೆಯುತ್ತೇನೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ಹೇಳಿದರು.

ಡಿಸೆಂಬರ್ 31ರಂದು ಅವರನ್ನು ಭೇಟಿಯಾಗಿ ಜನವರಿ 6ರಿಂದ ಆರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವಂತೆ ಆಹ್ವಾನ ನೀಡುತ್ತೇನೆ ಎಂದರು.

ರಾಜ್ಯಪಾಲರ ಜತೆಗಿನ ಸಂಘರ್ಷದ ಲಾಭವನ್ನು ಪಡೆಯಲು ವಿರೋಧ ಪಕ್ಷಗಳು ಹವಣಿಸುತ್ತಿವೆ. ಹಾಗಾಗಿ ಅವರ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಲು ಬಯಸಿದ್ದೇನೆ. ಸರಕಾರಕ್ಕೆ ಸಲಹೆ ನೀಡುವ ಅಧಿಕಾರ ಅವರಿಗೆ ಇದೆ. ಮುಖ್ಯಮಂತ್ರಿಯಾಗಿ ನಾನೂ ಅವರ ಸಲಹೆಗಳನ್ನು ಪಡೆದು ಸಂಘರ್ಷಕ್ಕೆ ಅಂತ್ಯ ಹಾಡುತ್ತೇನೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ