ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಂಚಾಯ್ತಿ ಚುನಾವಣೆ-ಬಿಜೆಪಿಯಿಂದ 500 ಕೋಟಿ ಖರ್ಚು: ಪರಮೇಶ್ವರ್ (BJP | KPCC | Parameshwar | Congress | Election)
Bookmark and Share Feedback Print
 
NRB
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಶತಾಯ-ಗತಾಯ ಮೇಲುಗೈ ಸಾಧಿಸಲೇಬೇಕೆಂದು ಬಿಜೆಪಿ ನಾಯಕರು ಸುಮಾರು 500 ಕೋಟಿ ರೂಪಾಯಿ ಖರ್ಚು ಮಾಡಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಮತದಾರರಿಗೆ ಬೇಕಾ ಬಿಟ್ಟಿ ಹಣ ಹಂಚುತ್ತಿದ್ದಾರೆ. ಅಲ್ಲದೇ ಅಧಿಕಾರವನ್ನೂ ದುರುಪಯೋಗಪಡಿಸಿಕೊಂಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ದೂರಿದರು.

ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದರೂ, ಆಯೋಗದ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರದ ಭ್ರಷ್ಟಾಚಾರ, ಭೂ ಹಗರಣಗಳು ಹಾಗೂ ಆಡಳಿತ ವೈಫಲ್ಯದ ಬಗ್ಗೆ ಜನರಿಗೆ ಅರಿವಿದೆ. ಹಳ್ಳಿಯ ಮುಗ್ದ ಜನರೂ ಈ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆಂಬ ವಿಶ್ವಾಸ ತಮಗಿದೆ ಎಂದರು.

ಭ್ರಷ್ಟಾಚಾರ ಇರಬೇಕೆ ? ಬೇಡವೇ ? ಎಂಬ ಬಗ್ಗೆ ಜನರೇ ತೀರ್ಪು ನೀಡಬೇಕೆಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿದರು. 24 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಜನರ ಒಲವು ಕಾಂಗ್ರೆಸ್ ಪರ ಇದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ