ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮತದಾರ ಬಿಜೆಪಿಗೆ ತಕ್ಕ ಪಾಠ ಕಲಿಸ್ತಾನೆ: ಎಚ್.ಕೆ.ಪಾಟೀಲ್ (HK Patil | BJP | Election | Hubballi | Congress)
Bookmark and Share Feedback Print
 
ಹರಕು ಸೀರೆ, ಮುರುಕು ಸೈಕಲ್ ಹಂಚುವ ಮೂಲಕ ರಾಜಕೀಯ ಗಿಮಿಕ್ ಮಾಡಿದ ಬಿಜೆಪಿಗೆ ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಮತದಾರ ತಕ್ಕ ಪಾಠ ಕಲಿಸಲಿದ್ದಾನೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ವಿಶ್ವಾಸವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಶೇ.70ಕ್ಕಿಂತಲ್ಲೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಪಡೆದುಯಲಿದೆ ಎಂದರು.

ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಸರಕಾರ ಆಡಳಿದಲ್ಲಿದ್ದಾಗ 10 ಲಕ್ಷ ಮನೆಗಳನ್ನು ಬಡ ಜನರಿಗೆ ವಿತರಿಸಿದೆ. ಬಡ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ ನೀಡಿದೆ. ಆದರೆ ಈಗಿನ ಬಿಜೆಪಿ ಸರಕಾರ ಜನಪರ ಯೋಜನೆಗಳನ್ನು ನೀಡುವ ಬದಲು ಕೇವಲ ಹಗರಣಗಳಲ್ಲಿಯೇ ಕಾಲ ಕಳೆಯುತ್ತಿದೆ ಎಂದು ವ್ಯಂಗ್ಯವಾಡಿದರು.

ಸರಕಾರದ ಕೆಟ್ಟ ಆಡಳಿತದಿಂದಾಗಿ ಜನತೆ ಬಿಜೆಪಿಯಿಂದ ದೂರ ಸರಿಯುತ್ತಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಆಡಳಿತದ ಜನಪರ ಯೋಜನೆ ಗಳಿಂದಾಗಿ ಮತದಾರ ಪಕ್ಷಕ್ಕೆ ಹತ್ತಿರವಾಗುತ್ತಿದ್ದಾನೆ ಎಂದು ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ