ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸೈಕಲ್ ಖರೀದಿ ಅವ್ಯವಹಾರ; ತನಿಖಾ ವರದಿ ಸಲ್ಲಿಕೆ (BJP | Yeddyurappa | Cycal buying scandal | Shankar murthy)
Bookmark and Share Feedback Print
 
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬೈಸಿಕಲ್ ಖರೀದಿಯಲ್ಲಿ ನಡೆದಿರುವ ಹಗರಣದ ಬಗ್ಗೆ ತನಿಖೆ ನಡೆಸಲು ನೇಮಕವಾಗಿದ್ದ ವಿಧಾನ ಪರಿಷತ್ ಸದಸ್ಯ ತೋಂಟದಾರ್ಯ ಅವರ ಅಧ್ಯಕ್ಷತೆಯ ವಿಶೇಷ ಸದನ ಸಮಿತಿ ಶುಕ್ರವಾರ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ವರದಿಯನ್ನು ಸಲ್ಲಿಸಿದೆ.

ವಿ.ಎಸ್.ಉಗ್ರಪ್ಪ ಅವರು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಸೈಕಲ್ ಖರೀದಿಯಲ್ಲಿ ಸಾಕಷ್ಟು ಅವ್ಯವಹಾರ, ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದರು. ನಂತರ ಸರಕಾರ ಎಂ.ಸಿ.ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸದನ ಸಮಿತಿಯನ್ನು ನೇಮಕ ಮಾಡಿತ್ತು. ಈ ಸಮಿತಿಯಲ್ಲಿ ಜೆಡಿಎಸ್‌ನ ಸರೋವರ ಶ್ರೀನಿವಾಸ್ ಮತ್ತು ಕಾಂಗ್ರೆಸ್‌ನ ಕೆ.ಸಿ.ಕೊಂಡಯ್ಯ ಸದಸ್ಯರಾಗಿದ್ದರು.

ಆದರೆ ಎಂ.ಸಿ.ನಾಣಯ್ಯ ಅವರ ಸದನ ಸಮಿತಿ ಅಧ್ಯಕ್ಷತೆಗೆ ರಾಜೀನಾಮೆ ಸಲ್ಲಿಸಿದ್ದರು. ಕೆ.ಸಿ.ಕೊಂಡಯ್ಯ ಮತ್ತು ಶ್ರೀನಿವಾಸ್ ಅವರು ಕೂಡ ರಾಜೀನಾಮೆ ಕೊಟ್ಟಿದ್ದರು.

ನಂತರದ ಅವಧಿಯಲ್ಲಿ ಬಿಜೆಪಿಯ ತೋಂಟದಾರ್ಯ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮರಿತಿಬ್ಬೇಗೌಡ, ಮೋಹನ ಲಿಂಬಾವಳಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ