ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡುವವರೆಗೂ ವಿಧಾನಮಂಡಲದ ಕಲಾಪ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಕುಮಾರ ಸ್ವಾಮಿ ತಿಳಿಸಿದ್ದಾರೆ.
ಜನವರಿ 6ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನ ಸುಗಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ. 2ಜಿ ಸ್ಪೆಕ್ಟ್ರಂ ಹಗರಣದ ಬಗ್ಗೆ ಜಂಟಿ ಸದನ ಸಮಿತಿಗೆ ಒತ್ತಾಯಿಸಿ ಬಿಜೆಪಿ ನಾಯಕರು ಸಂಸತ್ ಕಲಾಪ ನಡೆಯಲು ಅವಕಾಶ ನೀಡದೆ ನಡೆಸಿದ ಹೋರಾಟದ ಮಾದರಿಯಲ್ಲೇ ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟಿಸುವುದಾಗಿ ಹೇಳಿದ್ದಾರೆ.
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿ, ರಾಜಭವನದಿಂದ ಹೊರ ಬಂದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಅನುಮತಿ ನೀಡುವಂತೆ ಕೋರಿ ವಕೀಲರು ವಕೀಲರು ನೀಡಿರುವ ದೂರಿನ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.