ವಿಧಾನ ಮಂಡಲದ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್‌ನೊಂದಿಗೆ ಚರ್ಚಿಸಲಾಗುವುದು. ವರಿಷ್ಠರ ಹಸಿರು ನಿಶಾನೆ ದೊರೆತ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ, ಸಚಿವರ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಡಲಾಗಿದೆ. ವರಿಷ್ಠರು ನೀಡುವ ಆದೇಶಕ್ಕೆ ಬದ್ಧವಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಯವರಿಗೆ ದೂರು ನೀಡುವ ಹೇಳಿಕೆ ಕುರಿತಂತೆ ಪ್ರಶ್ನಿಸಿದಾಗ, ನಾನು ರಾಜ್ಯಪಾಲರು ಹಾಗೂ ಲೋಕಾಯುಕ್ತರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ಸಮನ್ವಯದ ಕೊರತೆಯಿಂದಾಗಿ ರಾಜ್ಯಪಾಲರ ಮತ್ತು ನನ್ನ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿತ್ತು ಎಂದರು.
ಮುಂಬರುವ ದಿನಗಳಲ್ಲಿ 15 ದಿನಗಳಿಗೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಸರಕಾರದ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಬಯಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.