ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಧಿವೇಶನದಲ್ಲಿ 8 ವಿಧೇಯಕ ಮಂಡನೆ: ಬೋಪಯ್ಯ (BJP | Bopayya | Bharadwaj | Yeddyurappa | Congress)
Bookmark and Share Feedback Print
 
ಜನವರಿ 6ರಿಂದ ಆರಂಭಗೊಳ್ಳಲಿರುವ ವಿಧಾನಸಭೆ ಅಧಿವೇಶನದಲ್ಲಿ ಎಂಟು ವಿಧೇಯಕಗಳನ್ನು ಮಂಡಿಸಲಾಗುವುದು ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ಜ.6ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಾನಮಂಡಲದ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಜ.7ರಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಬಾಕಿ ಇರುವ ವಿಧೇಯಕಗಳನ್ನು ಮಂಡಿಸಲಾಗುವುದು ಎಂದು ಸುದ್ದಿಗಾರರ ಜತೆ ಮಾತನಾಡುತ್ತ ವಿವರಿಸಿದರು.

ಕರ್ನಾಟಕ ಪಂಚಾಯತ್‌ರಾಜ್ ತಿದ್ದುಪಡಿ ವಿಧೇಯಕ ಪುನರ್ ಪರಿಶೀಲನೆಗಾಗಿ ಮಂಡಿಸಲಾಗುವುದು. ಈ ವಿಧೇಯಕ ಪುನರ್ ಪರಿಶೀಲನೆ ಮಾಡಬೇಕೆಂದು ರಾಷ್ಟ್ರಪತಿಯವರಿಂದ ಬಂದಿರುವ ಸಂದೇಶದ ಹಿನ್ನೆಲೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಲಾಗುವದು ಎಂದರು.

ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು. ಅಲ್ಲದೆ ಭೂಸ್ವಾಧೀನ ತಿದ್ದುಪಡಿ ವಿಧೇಯಕ ಸೇರಿದಂತೆ ಇನ್ನು 5 ವಿಧೇಯಕಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಈ ಬಾರಿ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ರಜಾದಿನಗಳನ್ನು ಹೊರತುಪಡಿಸಿ ಜನವರಿ 20ರ ತನಕ ಕಾರ್ಯಕಲಾಪಗಳು ನಡೆಯಲಿವೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ