ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಂದಿಲ್ಲವಾದರೂ ಅಡಳಿತರೂಢ ಪಕ್ಷಕ್ಕೆ ಜನತೆ ನೀಡಿದ ತೀರ್ಪು ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಮತ್ತು ತಾಪಂ ಚುನಾವಣೆಯಲ್ಲಿ ಮತದಾರರು ಪಕ್ಷಕ್ಕೆ ಉತ್ತಮ ಫಲಿತಾಂಶವನ್ನು ನೀಡಿದ್ದಾರೆ.ನಮ್ಮ ಸರಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಗೆ ಜನತೆ ಸ್ಪಂದಿಸಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸುವ ಮೂಲಕ 12 ಜಿಲ್ಲಾ ಪಂಚಾಯಿತಿಗಳಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಹಿಡಿದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
2005ರಲ್ಲಿ ನಡೆದ ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 22 ಜಿಲ್ಲೆಗಳಲ್ಲಿ ಜಯ ಸಾಧಿಸಿತ್ತು. ಬಿಜೆಪಿ ಪಕ್ಷ ಕೇವಲ ಒಂದು ಜಿಲ್ಲಾ ಪಂಚಾಯಿತಿಯಲ್ಲಿ ಗೆಲುವು ಪಡೆದಿತ್ತು.
ವಿರೋಧ ಪಕ್ಷಗಳು ತಮ್ಮ ಹೊಣೆಯನ್ನು ಅರಿತು, ರಾಜ್ಯದ ಅಭಿವೃದ್ಧಿಗಾಗಿ ನಮ್ಮೊಂದಿಗೆ ಕೈ ಜೋಡಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.