ಜಿ.ಪಂ. ಮತ್ತು ತಾ.ಪಂ. ಚುನಾವಣೆ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಲು ಜೆಡಿಎಸ್ ಸಿದ್ದವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಅಧಿಕಾರ ನಿರ್ವಹಣೆಯಲ್ಲಿ ಕಾಂಗ್ರೆಸ್‌ಗೆ ಎಲ್ಲ ರೀತಿಯ ಸಹಕಾರ ನೀಡಲು ಜೆಡಿಎಸ್ ಸಿದ್ದವಿದೆ ಎಂದರು. ಅಲ್ಲದೇ ಮೈತ್ರಿ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚಿಸಿ ಎರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.
ಜಾತ್ಯತೀತ ಶಕ್ತಿಗಳು ಒಂದಾದರೆ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಈ ವಾಸ್ತವ ಸ್ಥಿತಿಯನ್ನು ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಂಡು ಜೆಡಿಎಸ್ ಹೋರಾಟಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.