ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದಲ್ಲೇ ಗಣಿಗಾರಿಕೆ ಇಲ್ಲ-ಸಿಎಂ ಪತ್ರ ಅಚ್ಚರಿ ತಂದಿದೆ: ಹೆಗ್ಡೆ (BJP | JDS | Congress | Yeddyurappa | Lokayuktha | Hegde)
Bookmark and Share Feedback Print
 
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರಿಗೆ ಪತ್ರ ಬರೆದು ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯೇ ನಡೆಯುತ್ತಿಲ್ಲ ಎಂದು ಹೇಳಿರುವುದು ಆಶ್ಚರ್ಯ ತಂದಿದೆ ಎಂದು ಲೋಕಾಯುಕ್ತ ಸಂತೋಷ್ ಹೆಗಡೆ ತಿಳಿಸಿದ್ದಾರೆ.

ಮುಖ್ಯವಾಗಿ ಬಳ್ಳಾರಿ ಜಿಲ್ಲೆಯೊಂದರಲ್ಲಿ ಅತಿ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಬಳ್ಳಾರಿಯಿಂದ ಆಂಧ್ರದ ಪೂರ್ವ ಬಂದರಿಗೆ ಅಕ್ರಮ ಅದಿರು ಸಾಗಾಣಿಕೆ ನಡೆಯುತ್ತಿದೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ಸಿಎಂ ರಾಜ್ಯಪಾಲರಿಗೆ ಪತ್ರ ಬರೆದಿರುವುದು ತಪ್ಪು ಎಂದರು.

ಫೋರ್ಟಿಸ್ ಆಸ್ಪತ್ರೆಯಲ್ಲಿ ಅರವಳಿಕೆ ನೀಡುವಾಗ ಅನುಸರಿಸಬೇಕಾದ ಮಾರ್ಗದರ್ಶಿ ಸೂತ್ರದ ಶಿಷ್ಟಾಚಾರ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಯಾವ ಅರ್ಥದಲ್ಲಿ ಪತ್ರ ಬರೆದಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ, ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ನಡೆಯುತ್ತಿಲ್ಲ ಎಂದು ಹೇಳುತ್ತಿರುವುದು ಸರಿಯಾದ ಕ್ರಮವೇ ಎಂದು ಪ್ರಶ್ನಿಸಿದರು. ಪ್ರತಿಯೊಂದು ನದಿ ತೀರದ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ದಂಧೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ