ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರಿಗೆ ಸುಳ್ಳು ವರದಿಯನ್ನು ಸಲ್ಲಿಸಿದ್ದಾರೆ ಎಂದು ಲೋಕಾಯುಕ್ತ ಸಂತೋಷ್ ಹೆಗಡೆ ಹೇಳಿದ್ದಾರೆ.
ಮುಖ್ಯಮಂತ್ರಿಗಳು ರಾಜ್ಯದಲ್ಲಿ ಯಾವುದೇ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ವರದಿ ನೀಡಿರುವುದು ಅಚ್ಚರಿ ತಂದಿದೆ. ಇಂದಿಗೂ ಸಹ ಗಣಿ ಸಂಪತ್ತು ಬಳ್ಳಾರಿಯಿಂದ ನೇರವಾಗಿ ಆಂದ್ರಪ್ರದೇಶದ ಮೂಲಕ ಪೂರ್ವ ಸಮುದ್ರ ತೀರದಿಂದ ರವಾನೆಯಾಗುತ್ತಿದೆ. ಗಣಿಗಾರಿಕೆ ರಾಜ್ಯದಲ್ಲಿ ಅವ್ಯಾಹತವಾಗಿ ನಡೆದಿದೆ. ಆದರೆ, ಗಣಿಗಾರಿಕಯೇ ನಡೆದಿಲ್ಲವೆಂದು ಹೇಳಿರುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಅಡಳಿದಲ್ಲಿ ವ್ಯವಸ್ಥಿತ ಮಾನದಂಡಗಳ ಕೊರತೆಯಿಂದಾಗಿ ಸಮಾಜ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಯ ಆಗರಗಳಿಗೆ ಸಮರ್ಥ ಮಾನದಂಡಗಳು ಕೊರತೆಯಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಗಣಿಗಾರಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಆದರೆ, ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರಾಜ್ಯದಲ್ಲಿ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ವರದಿ ಸಲ್ಲಿಸಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅಸಮಧಾನ ವ್ಯಕ್ತಪಡಿಸಿದ್ದಾರೆ.