ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಹುಮತ ಪಡೆಯಲು ' ಆಪರೇಷನ್ ಕಮಲ' ಬಿಜೆಪಿ ತಂತ್ರ (Bjp | Government | Congress)
Bookmark and Share Feedback Print
 
NRB
ಗಣಿದಣಿಗಳ ನಾಡಾದ ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರವನ್ನು ಪಡೆಯಲು ಬಿಜೆಪಿ ಆಪರೇಶನ್ ಕಮಲ್ ಆರಂಭಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಬಹುಮತ ಕೊರತೆಯಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ‘ಆಪರೇಷನ್ ಕಮಲ’ ಕಾರ್ಯಾಚರಣೆಗೆ ಮತ್ತೆ ಚಾಲನೆ ನೀಡಿದೆ. ಆಪರೇಶನ್ ಕಮಲದ ಖ್ಯಾತಿಯ ರೆಡ್ಡಿ ಸಹೋದರರು ‘ಆಪರೇಷನ್ ಕಮಲ’ದ ಮೂಲಕ ಬಳ್ಳಾರಿಯಲ್ಲಿ ಬಿಜೆಪಿಗೆ ಬಹುಮತ ಪಡೆಯಲು ಕಾಂಗ್ರೆಸ್ ಅಭ್ಯರ್ಥಿಯನ್ನು ಸೆಳೆದುಕೊಂಡಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿಗೆ ಒಂದು ಸ್ಥಾನದ ಕೊರತೆ ಇತ್ತು.ಕಾಂಗ್ರೆಸ್‌ನ ನಾಗರತ್ನಮ್ಮ ಅವರನ್ನು ಸೆಳೆಯುವ ಮೂಲಕ ಸುಲಭವಾಗಿ ಆ ಕೊರತೆಯನ್ನು ನೀಗಿಸಿಕೊಂಡಿದೆ.

ಸಿರುಗುಪ್ಪ ತಾಲ್ಲೂಕಿನ ಹಳೆಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ನಾಗರತ್ನಮ್ಮ ಬುಧವಾರ ಸಚಿವರಾದ ಜಿ.ಜನಾರ್ದನರೆಡ್ಡಿ ಹಾಗೂ ಬಿ.ಶ್ರೀರಾಮುಲು ಅವರ ಸಮ್ಮುಖದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸುವುದಾಗಿ ಪ್ರಕಟಿಸಿದರು.

ಇದೇ ರೀತಿ ಬಹುಮತದ ಕೊರತೆಯಿರುವ ಜಿಪಂ,ತಾಪಂಗಳಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಯುವ ಸಾಧ್ಯತೆಗಳಿವೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸೇರಿದಂತೆ ಗುಲ್ಬರ್ಗ, ಕೊಪ್ಪಳ 4-5 ಕಡೆ ಬಿಜೆಪಿಗೆ ಅಧಿಕಾರಕ್ಕೆ ಬರಲು ಕೆಲ ಸ್ಥಾನಗಳ ಕೊರತೆ ಇದೆ. ಕೊರತೆಯನ್ನು ನೀಗಿಸಿಕೊಳ್ಳಲು ಆಪರೇಶನ್ ಕಮಲ ನಡೆಸುವ ಬಗ್ಗೆ ಬಿಜೆಪಿಯಲ್ಲಿ ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ..
ಸಂಬಂಧಿತ ಮಾಹಿತಿ ಹುಡುಕಿ