ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್, ಜೆಡಿಎಸ್ ಹಗರಣದ ಬಗ್ಗೆ ಮೌನವೇಕೆ?: ಶಾಸಕರಿಗೆ ಸಿಎಂ (Yeddyurappa | Congress | JDS | Land Scam | BJP)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಭೂ ಹಗರಣದ ಆರೋಪ ಹೊರಿಸಿ ವಾಗ್ದಾಳಿ ನಡೆಸುತ್ತಿದ್ದಾಗ, ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕರು ತಿರುಗೇಟು ನೀಡದಿರುವ ಬಗ್ಗೆ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ನನ್ನ ವಿರುದ್ಧ ಒಂದು ಎಕರೆ, ಎರಡು ಎಕರೆ ಭೂ ಹಗರಣದ ಬಗ್ಗೆ ಆರೋಪ ಮಾಡುವ ಪ್ರತಿಪಕ್ಷಗಳ ಮುಖಂಡರು 50-100 ಎಕರೆ ಗುಳುಂ ಮಾಡಿದ ಹಗರಣಗಳಿವೆ. ಆದರೆ ಅವುಗಳ ಬಗ್ಗೆ ಪಕ್ಷದ ಶಾಸಕರಾರು ಯಾಕೆ ಬಾಯಿ ಬಿಡುತ್ತಿಲ್ಲ' ಎಂದು ಯಡಿಯೂರಪ್ಪ ನೇರವಾಗಿಯೇ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಸಕ್ತ ಅಧಿವೇಶನದಲ್ಲಿ ಪ್ರತಿಪಕ್ಷಗಳ ಮುಖಂಡರು ಮತ್ತೆ ಆರೋಪ ಮಾಡಿದಾಗ ಅದಕ್ಕೆ ಶಾಸಕರು ತಕ್ಕ ಉತ್ತರ ನೀಡಬೇಕೆಂದು ತಾಕೀತು ಮಾಡಿದ್ದಾರೆನ್ನಲಾಗಿದೆ. ಗುರುವಾರ ಸಂಜೆ ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡುವಾಗ ಈ ಎಚ್ಚರಿಕೆ ನೀಡಿದ್ದಾರೆಂದು ಮೂಲವೊಂದು ತಿಳಿಸಿದೆ.

ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವು ಎಷ್ಟೆಲ್ಲ ಪರಿಶ್ರಮಪಟ್ಟರೂ ಈಗ ಅದೇ ಪಕ್ಷದ ಶಾಸಕರು ತಮ್ಮ ಬೆಂಬಲಕ್ಕೆ ನಿಲ್ಲದಿರುವುದು ತೀವ್ರ ಬೇಸರ ಮೂಡಿಸಿದೆ ಎಂದರು. ಪ್ರತಿಪಕ್ಷಗಳ ಮುಖಂಡರು ನೂರಾರು ಎಕರೆ ಭೂಮಿ ಕಬಳಿಸಿದ್ದಾರೆ. ಆ ಬಗ್ಗೆ ಹಲವಾರು ದಾಖಲೆಗಳನ್ನು ಪಕ್ಷದ ವತಿಯಿಂದ ಬಿಡುಗಡೆ ಮಾಡಲಾಗಿದೆ. ಆದರೂ ಆ ಬಗ್ಗೆ ನಮ್ಮ ಪಕ್ಷದ ಶಾಸಕರು ಅಥವಾ ಸಚಿವರು ಬಹಿರಂಗವಾಗಿ ಮಾತನಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ