ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚುನಾವಣೆ-ಕಾಂಗ್ರೆಸ್ ಯಾಕೆ ಗೆಲುವು ಸಾಧಿಸಿಲ್ಲ: ಸಾಲಿಂಗಯ್ಯ (BJP | Congress | JDS | Yeddyurappa | Jayachandra | Salingayya)
Bookmark and Share Feedback Print
 
ಜಿ.ಪಂ. ಮತ್ತು ತಾ.ಪಂ. ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಟಿ.ಬಿ. ಜಯಚಂದ್ರ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಜಿ ಶಾಸಕ ಸಾಲಿಂಗಯ್ಯ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಹಲವಾರು ಹಗರಣಗಳಲ್ಲಿ ಸಿಲುಕಿದ್ದರೂ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಆದರೆ ಕಾಂಗ್ರೆಸ್‌ಗೆ ಏಕೆ ಸಾಧ್ಯವಾಗಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ಚುನಾವಣೆಯಲ್ಲಿ ಮೀಸಲು ಗೊಂದಲ ಮೂಡಿಸಿ, ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣೆಯ ಬಗ್ಗೆ ಸಂಘಟನೆ ನಡೆಸಲು ತೊಂದರೆಯಾಯಿತು. ಇದು ಬಿಜೆಪಿಗೆ ವರದಾನವಾಯಿತು ಎಂದರು.

ಜಿಲ್ಲೆಯ ಇತಿಹಾಸದಲ್ಲಿ ಎಂದೂ ಕಾಂಗ್ರೆಸ್ ಇಂತಹ ಹೀನಾಯ ಸೋಲು ಕಂಡಿರಲಿಲ್ಲ, ಪಕ್ಷದ ನಾಯಕರಲ್ಲಿನ ಸಾಮರಸ್ಯದ ಕೊರತೆಯಿಂದಾಗಿ ಇಂದು ದುಬಾರಿ ಬೆಲೆ ತೆರಬೇಕಾಯಿತು. ಜಿಲ್ಲಾಧ್ಯಕ್ಷರು ತನ್ನ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ. ಟಿಕೆಟ್ ಹಂಚಿಕೆ ಸಮಯದಲ್ಲಿ ಪಕ್ಷದ ಎಲ್ಲ ಮುಖಂಡರನ್ನು ಗಣನೆಗೆ ತೆಗೆದುಕೊಂಡಿದ್ದರೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಇವರಿಂದ ಸಾಧ್ಯವಿಲ್ಲ ಎಂದರು.

ಜೆಡಿಎಸ್ ಪಕ್ಷಕ್ಕೆ ವೈಯಕ್ತಿಕ ವರ್ಚಸಿಲ್ಲ. ಪ್ರಸ್ತುತ ಸಮಯದಲ್ಲಿ ಕಾಂಗ್ರೆಸ್ ಸದೃಢಗೊಳಿಸಲು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಂದ ಮಾತ್ರ ಸಾಧ್ಯ. ಯಾವುದೇ ಸಮಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ ತಕ್ಷಣ ಸಿದ್ದರಾಮಯ್ಯನವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದರೆ ಮಾತ್ರ ಪಕ್ಷಕ್ಕೆ ರಾಜ್ಯದಲ್ಲಿ ಭವಿಷ್ಯವಿರುತ್ತದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ