ರೈತರು ಆತ್ಮಸ್ಥೈರ್ಯದಿಂದ ಸಮಸ್ಯೆ ಎದುರಿಸಬೇಕು. ಆತ್ಮಹತ್ಯೆ ಪರಿಹಾರವಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುಮ್ತಾಜ್ ಅಲಿಖಾನ್ ಹೇಳಿದರು.
ಭೀಮರಾಯನಗುಡಿಯಲ್ಲಿ ಕೃಷಿ ತೋಟಗಾರಿಕೆ, ಜಲಾನಯನ ಅಭಿವೃದ್ಧಿ, ಮೀನುಗಾರಿಕೆ, ಪಶು ಸಂಗೋಪನೆ ಇಲಾಖೆ, ಕೃಷಿ ವಿವಿ ರಾಯಚೂರು ಮತ್ತು ಕೃಷಿ ವಿಶ್ವವಿದ್ಯಾಲಯ ಭೀಮರಾಯನಗುಡಿ ಸಹಯೋಗದಲ್ಲಿ ಹಮ್ಮಿಕೊಂಡ ಕೃಷಿ ಮೇಳ ಮತ್ತು ಜಿಲ್ಲಾ ಕೃಷಿ ಉತ್ಸವ 2011 ಉದ್ಘಾಟಿಸಿ, ಆತ್ಮಹತ್ಯೆಯ ನಂತರ ಅವರ ಕುಟುಂಬಕ್ಕೆ ಸರಕಾರ ಪರಿಹಾರ ನೀಡುವ ಬದಲಿಗೆ ಕೃಷಿಕರ ಬೆಳೆಗೆ ಉತ್ತಮ ಬೆಲೆ ನೀಡುವ ಒಂದು ಸೂತ್ರ ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದರು.
ರೈತರಿಗೆ ಬಿಜೆಪಿ ಸರಕಾರ ಕಡಿಮೆ ಬಡ್ಡಿ ದರದಲ್ಲಿ ಸಾಲದ ವ್ಯವಸ್ಥೆ ಮತ್ತು ಬೆಳೆಗೆ ಬೆಂಬಲ ಬೆಲೆ ನೀಡುವ ಮೂಲಕ ಸಹಾಯ ಹಸ್ತ ನೀಡುತ್ತಿದೆ ಎಂದು ತಿಳಿಸಿದರು.
ಕೃಷಿ ವಿಶ್ವವಿದ್ಯಾಲಯಗಳು ಗ್ರಾಮೀಣ ಪ್ರದೇಶದತ್ತ ಹೋಗಿ ಅಲ್ಲಿನ ರೈತರಿಗೆ ಮಾರ್ಗದರ್ಶನ ನೀಡಲು ಮುಂದಾಗಬೇಕು ಎಂದರು. ವಿಶ್ವವಿದ್ಯಾಲಯದಲ್ಲಿ ಅಲ್ಪ ಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.