ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಷ್ಟ್ರಪತಿ ಆಳ್ವಿಕೆಗೆ ಹುನ್ನಾರ; ಸಿಎಂ ಗಂಭೀರ ಆರೋಪ (Yadyurappa | President | Karnataka | State Politics)
Bookmark and Share Feedback Print
 
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರತಿಪಕ್ಷಗಳು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ವಿರೋಧ ಪಕ್ಷಗಳ ನಾಯಕರು ಪದೇ ಪದೇ ರಾಜ್ಯಭವನಕ್ಕೆ ಭೇಟಿ ನೀಡುತ್ತಿರುವುದು ಹಾಗೂ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದರ ಬಗ್ಗೆ ಸಿಎಂ ಶಂಕೆ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ವಿರುದ್ಧ ನಿಲುವಳಿ ಸೂಚನೆ ಒತ್ತಾಯಿಸಿ ಪ್ರತಿಪಕ್ಷ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ ಕಲಾಪ ನಡೆದಿಲ್ಲ. ಭ್ರಷ್ಟಾಚಾರ ಕುರಿತ ಚರ್ಚೆಯಿಂದ ಸರ್ಕಾರ ಹಿಂದೆ ಸರಿಯುತ್ತಿಲ್ಲ. ಆದರೆ ಪ್ರತಿಪಕ್ಷಗಳು ತಾವು ಹೇಳಿದಂತೆಯೇ ಸದನ ನಡೆಯಬೇಕು ಎಂದು ಪಟ್ಟು ಹಿಡಿಯುವುದು ಸರಿಯಲ್ಲ. ಸರಕಾರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಈ ರೀತಿಯಾಗಿ ವರ್ತಿಸುತ್ತಿವೆ ಎಂದು ದೂರಿದರು.

ಸರಕಾರದ ವಿರುದ್ಧ ಭ್ರಷ್ಟಾಚಾರದ ಆಧಾರರಹಿತ ಆರೋಪಗಳನ್ನು ಮಾಡಿ ರಾಷ್ಟ್ರಪತಿ ಆಳ್ವಿಕೆ ಹೇರುವ ಹುನ್ನಾರ ನಡೆಯುತ್ತಿದೆ. ಆದರೆ ಮುಂದಿನ ಎರಡೂ ಕಾಲು ವರ್ಷ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ. ತದಾ ನಂತರ ಏನು ಆಗುತ್ತದೋ ನೋಡೋಣ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದರು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ
ಸಂಬಂಧಿತ ಮಾಹಿತಿ ಹುಡುಕಿ