ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂಹಗರಣ: ಆಯೋಗದ ತನಿಖೆಗೆ ಹೈಕೋರ್ಟ್ 4 ವಾರ ಬ್ರೇಕ್ (Land scam | High court | JDS | Dutta | Yeddyurappa,)
Bookmark and Share Feedback Print
 
NRB
ಭೂ ಹಗರಣ ಮತ್ತು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ರಾಜ್ಯ ಸರಕಾರದಿಂದ ನೇಮಕಗೊಂಡ ನ್ಯಾಯಮೂರ್ತಿ ಬಿ.ಪದ್ಮರಾಜ್ ನೇತೃತ್ವದ ತನಿಖಾ ಆಯೋಗ ನಾಲ್ಕು ವಾರಗಳ ಕಾಲ ತನಿಖೆ ನಡೆಸದಂತೆ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಭೂಹಗರಣದ ತನಿಖೆಯನ್ನು ಲೋಕಾಯುಕ್ತರೇ ಮುಂದುವರಿಸಬೇಕೆಂದು ಆದೇಶಿಸುವಂತೆ ಕೋರಿ ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯ ಹಿನ್ನೆಲೆಯಲ್ಲಿ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೇ ಈ ಬಗ್ಗೆ ಮೂರು ವಾರಗಳ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಫೆಬ್ರುವರಿ 11ಕ್ಕೆ ಮುಂದೂಡಿದೆ.

ಸರಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಭೂ ಹಗರಣಗಳ ತನಿಖೆಯನ್ನು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹಾಗೂ ನ್ಯಾ.ಪದ್ಮರಾಜ್ ನೇತೃತ್ವದ ತನಿಖಾ ಆಯೋಗ ಎರಡೂ ಒಟ್ಟಿಗೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ವೇಳೆ ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿತ್ತು.

ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಸಾಕ್ಷಿಗಳ ವಿಚಾರಣೆ ನಡೆಯುವ ಕಾರಣ ಅಂತಿಮವಾಗಿ ವಿಭಿನ್ನ ನಿಲುವು ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಹಾಗೂ ನ್ಯಾ.ಎಂ.ಎಸ್.ಬೋಪಣ್ಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ದತ್ತ ಅವರು ಸರಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಸಲ್ಲಿಸಿರುವ ದೂರಿನ ವಿಚಾರಣೆಯನ್ನು ಇಬ್ಬರೂ ನಡೆಸುವುದು ಸಮರ್ಪಕವೇ ಅಥವಾ ಅರ್ಜಿದಾರರ ಮನವಿಯಂತೆ ಲೋಕಾಯುಕ್ತರೇ ನಡೆಸಬೇಕೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೆ.ಎಂ.ನಟರಾಜ್ ಅವರಿಗೆ ಪೀಠ ಆದೇಶಿಸಿ, ಶುಕ್ರವಾರವೇ ಮಾಹಿತಿ ನೀಡುವಂತೆ ಸೂಚಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ