ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮಾಹಿತಿ ಹಕ್ಕು ಆಯುಕ್ತರಾಗಿ ನಾಯಕ್ ಅಧಿಕಾರ ಸ್ವೀಕಾರ (RTI | Nayak | Bangalore | Bharadwaj | Dalith Protest)
Bookmark and Share Feedback Print
 
ಮಾಹಿತಿ ಹಕ್ಕು ಮುಖ್ಯ ಆಯುಕ್ತರಾಗಿ ನಿವೃತ್ತ ಪೊಲೀಸ್ ಅಧಿಕಾರಿ ಎ.ಕೆ.ಎಂ.ನಾಯಕ್ ಅವರು ಬುಧವಾರ ರಾಜಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ರಾಜಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ನಾಯಕ್ ಅವರಿಗೆ ಪ್ರಮಾಣವಚನ ಮತ್ತು ಅಧಿಕಾರ ಗೌಪ್ಯತೆ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಮಾಹಿತಿ ಹಕ್ಕು ಆಯುಕ್ತರಾಗಿ ಎಂ.ಆರ್.ಪೂಜಾರ್, ಡಿ.ಚಂದ್ರಹಾಸ, ಟಿ.ರಾಮನಾಯಕ್, ಸಜ್ಜನರ್ ಅವರು ಕೂಡ ಅಧಿಕಾರ ವಹಿಸಿಕೊಂಡರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರತಿಭಟನೆ;
ಮಾಹಿತಿ ಹಕ್ಕು ಮುಖ್ಯ ಆಯುಕ್ತರಾಗಿ ಎ.ಕೆ.ಎಂ.ನಾಯಕ್ ಅವರು ಅಧಿಕಾರ ಸ್ವೀಕರಿಸಬಾರದು ಎಂದು ಆಗ್ರಹಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಬಹುಮಹಡಿ ಕಟ್ಟಡದಲ್ಲಿರುವ ಮಾಹಿತಿ ಹಕ್ಕು ಕಚೇರಿ ಸಮೀಪದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ದಲಿತಪರ ಸಂಘಟನೆಗಳ ಮುಖಂಡರು, ನಾಯಕ್ ಅವರು ಯಾವುದೇ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಈ ಹಿಂದೆ ಹೇಳಿದ್ದರು. ಆದರೆ ಆ ಮಾತಿಗೆ ತಪ್ಪಿ ಈಗ ಮಾಹಿತಿ ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಘೋಷಣೆ ಕೂಗಿದರು. ನಂತರ ನಾಯಕ್ ಅವರು ಪ್ರತಿಭಟನಾಕಾರರ ಜತೆ ಚರ್ಚೆ ನಡೆಸಿ ಪ್ರತಿಭಟನೆಯನ್ನು ಶಾಂತಗೊಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ