ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳಿಗೆ 3 ಲಕ್ಷ ಮನೆ:ಸೋಮಣ್ಣ (Somanna | BJP | karnataka | Yeddyurappa | Vajapeyi Nagar)
Bookmark and Share Feedback Print
 
ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳಿಗೆ ಪ್ರಸಕ್ತ ಸಾಲಿನ ಫೆಬ್ರುವರಿ ತಿಂಗಳಲ್ಲಿ ಮೂರು ಲಕ್ಷ ಮನೆಗಳನ್ನು ನೀಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರಾಜ್ಯ ವಸತಿ ಇಲಾಖೆಯಿಂದ ವಾಜಪೇಯಿ ನಗರ ವಸತಿ ಯೋಜನೆಯಡಿ ಸಿಂಗನಾಯಕನಹಳ್ಳಿಯಲ್ಲಿ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಯೋಜನೆಯಡಿ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗೆ 63 ಸಾವಿರ ರೂ. ವರ್ಗಾಯಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ 50 ಸಾವಿರ ಕುಟುಂಬಗಳಿಗೆ ಸೂರು ಕಲ್ಪಿಸುವ ಗುರಿಯನ್ನು ಸರಕಾರ ಹೊಂದಿದೆ. ಈ ಪೈಕಿ ಬೆಂಗಳೂರಿನ ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 550ರಂತೆ ಕನಿಷ್ಠ 15,150 ಮನೆಗಳನ್ನು ನಿರ್ಮಿಸುವ ಗುರಿಯಿದೆ. ನಗರ ಪ್ರದೇಶದಲ್ಲಿ ಮೊಟ್ಟ ಮೊದಲ ಬಾರಿ ವಾಜಪೇಯಿ ವಸತಿ ಯೋಜನೆ ಮೂಲಕ 50 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದರು.

ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ವಾಜಪೇಯಿ ವಸತಿ ಯೋಜನೆಯಡಿ ಸಿಂಗನಾಯಕನಹಳ್ಳಿಯ 11.5 ಎಕರೆ ಪ್ರದೇಶದಲ್ಲಿ ಈಗಾಗಲೇ 200 ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 200 ಮನೆಗಳನ್ನು ನಿರ್ಮಿಸಲು ಇಂದು ಪೂಜೆ ನೆರವೇರಿಸಿದ್ದು, ಪ್ರತಿ ಮನೆಗೆ 1.35 ಲಕ್ಷ ರೂ. ವೆಚ್ಚವಾಗಲಿದೆ. ಸರಕಾರದಿಂದ 50 ಸಾವಿರ ರೂ. ಸಹಾಯಧನ, ಬ್ಯಾಂಕ್‌ನಿಂದ ಸಾಲದ ರೂಪದಲ್ಲಿ 50 ಸಾವಿರ ರೂ., ಫಲಾನುಭವಿಗಳಿಂದ ವಂತಿಕೆ (ಡಿ.ಡಿ.) ರೂಪದಲ್ಲಿ 35 ಸಾವಿರ ರೂ. ಪಡೆದು 285 ಚದರ ಅಡಿ ನಿವೇಶನದಲ್ಲಿ ಒಂದು ಮನೆ ನಿರ್ಮಿಸಲಾಗುತ್ತಿದೆ ಎಂದು ವಿವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ