ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕ್ಷಮೆಯಾಚಿಸ್ಲಿ-ಸರಕಾರ ವಿಸರ್ಜನೆಗೆ ಗವರ್ನರ್ ಒತ್ತಡ; ಸಿಎಂ (Yeddyurappa | HR Bhardwaj | President | BJP | Congress,)
Bookmark and Share Feedback Print
 
PTI
ರಾಜ್ಯಪಾಲ ಭಾರದ್ವಾಜ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡುವಿನ ಜಂಗೀಕುಸ್ತಿ ಅಂತ್ಯಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ, ಬಿಜೆಪಿ ಮುಖಂಡರ ವರ್ತನೆ ಕಳ್ಳನೇ ಪೊಲೀಸರನ್ನು ಹೆದರಿಸೋ ತರ ಇದೆ ಎಂಬ ಹೇಳಿಕೆಯನ್ನು ಖಂಡಿಸಿ ಯಡಿಯೂರಪ್ಪ ಗುರುವಾರ ರಾತ್ರಿ ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ನೀಡಿರುವ ಹೇಳಿಕೆಯನ್ನು ದೃಶ್ಯ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ರಾಜ್ಯಪಾಲರ ಹುದ್ದೆಯಲ್ಲಿರುವ ತಾವು ಈ ರೀತಿ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಹುದ್ದೆ, ಸಚಿವ ಸಂಪುಟ ಹಾಗೂ ರಾಜ್ಯದ ಮತದಾರರ ಘನತೆಗೆ ಧಕ್ಕೆ ಉಂಟು ಮಾಡಿದ್ದೀರಿ ಎಂದು ಸಿಎಂ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ಕೈಗೊಂಡ ನಿರ್ಣಯವನ್ನು ಜ.19ರಂದು ತಮಗೆ ಪತ್ರ ಬರೆದು ತಿಳಿಸಿದ್ದೇನೆ. ಆದರೆ ತಾವು ಸಂಪುಟ ಸಭೆಯ ನಿರ್ಣಯವನ್ನು ಈ ರೀತಿ ಕಳ್ಳನಿಗೆ ಹೋಲಿಕೆ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಇತ್ತೀಚೆಗೆ ತಾವು ನೀಡುತ್ತಿರುವ ಹೇಳಿಕೆಯನ್ನು ಗಮನಿಸಿದರೆ ಪಕ್ಷಪಾತಿತನದಿಂದ ವರ್ತಿಸುತ್ತಿರುವುದು ಸಾಬೀತಾಗಿದೆ. ಹಾಗಾಗಿ ನಿಮ್ಮಿಂದ ನಿಷ್ಪಕ್ಷಪಾತ ಮತ್ತು ನ್ಯಾಯಯುತ ಫಲಿತಾಂಶ ನಿರೀಕ್ಷಿಸುವುದು ತಪ್ಪಾಗುತ್ತದೆ ಎಂದು ಪತ್ರದಲ್ಲಿ ಖಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಭೂ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ಹಾಗೂ ಗೃಹಸಚಿವ ಆರ್.ಅಶೋಕ್ ವಿರುದ್ಧ ಮೊಕದ್ದಮೆ ದಾಖಲಿಸಲು ಜಸ್ಟೀಸ್ ಲಾಯರ್ ಫೋರಂ ಸಲ್ಲಿಸಿರುವ ಮನವಿಗೆ ಅನುಮತಿ ನೀಡುವುದು ಬೇಡ ಎಂಬುದಾಗಿಯೂ ಪತ್ರದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

ವಿಧಾನಸಭೆ ವಿಸರ್ಜಿಸಲು ರಾಜ್ಯಪಾಲರ ಒತ್ತಡ-ಸಿಎಂ ಬಾಂಬ್;
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಸರಕಾರವನ್ನು ವಿಸರ್ಜಿಸುವಂತೆ ಪದೇ, ಪದೇ ಒತ್ತಡ ಹೇರುತ್ತಲೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್‌ವೊಂದನ್ನು ಸಿಡಿಸಿದ್ದಾರೆ.

ಖಾಸಗಿ ಚಾನೆಲ್‌ವೊಂದರ ಜತೆ ಮಾತನಾಡಿದ ಅವರು, ಆ ನಿಟ್ಟಿನಲ್ಲಿ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳುವಂತೆ ಶುಕ್ರವಾರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಅಲ್ಲದೇ ರಾಜ್ಯಪಾಲರು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂಬುದಾಗಿ ಹೇಳಿದ್ದಾರೆ.

ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳುವ ವಿಷಯದಲ್ಲಿ ಜನವರಿ 24ರಂದು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಖುದ್ದಾಗಿ ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ನಾಳೆ ಮತ್ತೆ ತುರ್ತು ಸಚಿವ ಸಂಪುಟ ಸಭೆ;
ರಾಜ್ಯಪಾಲ ಮತ್ತು ಯಡಿಯೂರಪ್ಪ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಶನಿವಾರ ಮಧ್ಯಾಹ್ನ ಮತ್ತೆ ತುರ್ತು ಸಚಿವ ಸಂಪುಟ ಸಭೆ ನಡೆಯಲಿದ್ದು, ಅಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ