ಆಡಳಿತಾರೂಢ ಬಿಜೆಪಿ ಸರಕಾರವನ್ನು ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು. ಅಷ್ಟೇ ಅಲ್ಲ ಅವರೇ ಮುಂದಿನ ಅವಧಿಯವರೆಗೂ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸುವ ಮೂಲಕ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.
ರಾಜ್ಯದ ಜನರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ ಐದು ವರ್ಷಗಳ ಕಾಲ ಆಡಳಿತ ನಡೆಸುವಂತೆ ಆಶೀರ್ವಾದ ಮಾಡಿದ್ದಾರೆ. ಆದರೆ ಕೆಲವು ಪೂರ್ವಾಗ್ರಹ ಪೀಡಿತರು ಸರಕಾರವನ್ನು ಉರುಳಿಸುವ ಸಂಚು ನಡೆಸುತ್ತಲೇ ಇದ್ದಾರೆ ಎಂದು ಆರೋಪಿಸಿದರು.
ದಿನಂಪ್ರತಿ ನಡೆಯುತ್ತಿರುವ ರಾಜ್ಯರಾಜಕಾರಣದ ಬೆಳವಣಿಗೆಯನ್ನು ರಾಜ್ಯದ ಆರು ಕೋಟಿ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಷ್ಟೇ ಅಲ್ಲ ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.