ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರಾಸಿಕ್ಯೂಷನ್‌ಗೆ ಅಸ್ತು; ಸಿಎಂ ರಾಜೀನಾಮೆ ನೀಡ್ಬೇಕೆ-ಬೇಡವೇ? (H R Bhardwaj | prosecution | Yeddyurappa | BJP | KSRTC)
Bookmark and Share Feedback Print
 
PTI
ಭೂ ಹಗರಣ ಮತ್ತು ಭ್ರಷ್ಟಾಚಾರ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಅನುಮತಿ ನೀಡಿರುವುದರಿಂದ ಇದೀಗ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರಿಯುತ್ತಾರೋ ಅಥವಾ ರಾಜೀನಾಮೆ ಕೊಟ್ಟು ಕೆಳಗಿಳಿಯುತ್ತಾರೋ ಎಂಬ ಜಿಜ್ಞಾಸೆ ಮೂಡಿಸಿದೆ.

ಜಸ್ಟೀಸ್ ಲಾಯರ್ ಫೋರಂ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಆರ್.ಅಶೋಕ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿ ನೂರಾರು ಪುಟಗಳ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದ್ದರು. ತದನಂತರ ಗವರ್ನರ್ ಮತ್ತು ಯಡಿಯೂರಪ್ಪ ನಡುವೆ ಸಾಕಷ್ಟು ಜಂಗೀಕುಸ್ತಿ ನಡೆದಿತ್ತು. ಅಂತೂ ಶುಕ್ರವಾರ ರಾತ್ರಿ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ (ಪ್ರಾಸಿಕ್ಯೂಷನ್‌ನಿಂದ ಅಶೋಕ್ ಅವರನ್ನು ಹೊರಗಿಡಲಾಗಿದೆ) ಅನುಮತಿ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಕಾಣಿಸಿಕೊಂಡಿದೆ.

ಆದರೆ ಗವರ್ನರ್ ಅವರು ರಾಜ್ಯಪಾಲರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಕೂಡಲೇ ರಾಜೀನಾಮೆ ನೀಡಲೇಬೇಕೆಂದೇನೂ ಇಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಕೊಡುವುದು ಅಥವಾ ಬಿಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ರವಿ.ಬಿ.ನಾಯಕ್ ತಿಳಿಸಿದ್ದು, ಏತನ್ಮಧ್ಯೆ ರಾಜ್ಯಪಾಲರು ನೀಡಿರುವ ಅನುಮತಿಗೆ ತಡೆ ನೀಡುವಂತೆ ಕೋರಿ ಅವರು ಕೂಡಲೇ ಹೈಕೋರ್ಟ್‌ನಲ್ಲಿ ತಡೆ ಸಲ್ಲಿಸಬಹುದಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 19(1)ನೇ ಕಲಂ ಅನ್ವಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅದನ್ನು ನೇರವಾಗಿ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಅವಕಾಶ ಇದೆ. ಈ ಮೂಲಕ ಸದ್ಯದ ಮಟ್ಟಿಗೆ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಶನಿವಾರ ಹೈಕೋರ್ಟ್‌ನಲ್ಲಿ ವಿಶೇಷ ಕಲಾಪ ನಡೆಯಲಿರುವ ಹಿನ್ನೆಲೆಯಲ್ಲಿ ಅದರ ಪ್ರಯೋಜನವನ್ನು ಅವರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

PTI
ಕೋರ್ಟ್‌ನಲ್ಲಿನ ಅವಕಾಶಗಳು ಏನು?
ಮುಖ್ಯಮಂತ್ರಿಗಳ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಸರಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಬಹುದು.

ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಸರಕಾರ ಸದ್ಯಕ್ಕೆ ಅಪಾಯದಿಂದ ಪಾರಾಗುತ್ತದೆ. ತಡೆಯಾಜ್ಞೆ ನಿರಾಕರಿಸಿದರೆ ಸುಪ್ರೀಂಕೋರ್ಟ್ ಮೊರೆ ಹೋಗಬಹುದು.

ಇನ್ನೆರಡು ದಿನದಲ್ಲಿ ಸಿಎಂ ವಿರುದ್ಧ ದೂರು;
ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ವಕೀಲರಾದ ಸಿರಾಜ್ ಬಾಷಾ ಮತ್ತು ಕೆ.ಎನ್.ಬಾಲರಾಜ್ ನಿರ್ಧರಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ನಿಯಮ 13 (1)(ಡಿ) ಮತ್ತು ನಿಯಮ 13(1)(ಇ) ಅಡಿಯಲ್ಲಿ ಮತ್ತು ಭಾರತೀಯ ದಂಡ ಸಂಹಿತೆ 405ರ ಅಡಿಯಲ್ಲಿ ಇನ್ನೆರಡು ದಿನಗಳಲ್ಲಿ ವಿಶೇಷ ನ್ಯಾಯಾಲಯದ ಮುಂದೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿರುವುದು ಸಂವಿಧಾನಕ್ಕೆ ದೊರೆತ ಜಯ ಎಂದು ವಕೀಲರಾದ ಸಿರಾಜ್ ಬಾಷಾ ಮತ್ತು ಬಾಲರಾಜ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಬಂದ್ ವರದಿ ಕೊಡಿ;ಗವರ್ನರ್‌ಗೆ ಕಾಂಗ್ರೆಸ್ ಬೆಂಬಲ

ಪ್ರಜಾಪ್ರಭುತ್ವದ ಕೊಲೆಗೈದ ರಾಜ್ಯಪಾಲ;ಸಿಎಂ ಕಿಡಿ

ಗವರ್ನರ್ ವಿರುದ್ಧ ವಾರ್;ರಾಜ್ಯ ಬಂದ್, ಬಸ್‌ಗೆ ಬೆಂಕಿ
ಸಂಬಂಧಿತ ಮಾಹಿತಿ ಹುಡುಕಿ