ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮಾನ, ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಅಧಿಕಾರದಲ್ಲಿರುವ ನೈತಿಕ ಹಕ್ಕು ಕಳೆದುಕೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪಗೆ ಜೈಲಿಗೆ ಹೋಗುವ ಭಯ ಕಾಡುತ್ತಿದೆ. ಹಾಗಾಗಿ ಯಡಿಯೂರಪ್ಪನವರಿಗೆ ಧೈರ್ಯವಿದ್ದರೆ ರಾಜ್ಯಪಾಲರು ಸಮ್ಮತಿ ನೀಡಿರುವ ಮೊಕದ್ದಮೆ ಪ್ರಕರಣದ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎಲ್ಲಾ ಬೆಳವಣಿಗೆಗಳನ್ನು ನೋಡಿಕೊಂಡು ಕಾಂಗ್ರೆಸ್ ಸುಮ್ಮನೆ ಕೂರುವುದಿಲ್ಲ ಎಂದು ತಿಳಿಸಿದ್ದಾರೆ. ಭ್ರಷ್ಟ ಬಿಜೆಪಿ ಸರಕಾರ ಹಾಗೂ ಸೃಜನ ಪಕ್ಷಪಾತ, ಹಗರಣಗಳ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಸಿದ್ದವಿದೆ ಎಂದು ಹೇಳಿದರು.