ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಮೇಲಿನ ದಾಳಿಯನ್ನು ತೀವ್ರಗೊಳಿಸಿರುವ ಬಿಜೆಪಿಯ ಶಾಸಕರು, ರಾಜ್ಯಪಾಲರನ್ನು ತಕ್ಷಣವೇ ಕೇಂದ್ರವು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜಭವನದೆದುರು ಮಂಗಳವಾರ ಧರಣಿ ನಡೆಸಲು ತೀರ್ಮಾನಿಸಿದ್ದಾರೆ.
ಭೂಹಗರಣ ಆರೋಪದಲ್ಲಿ ವಿಚಾರಣೆ ನಡೆಸದೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧದ ಆಕ್ರೋಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಳಿಗ್ಗೆ ರಾಜಭವನದ ಸಮೀಪವಿರುವ ಹೋಟೆಲ್ ಒಂದರಲ್ಲಿ ಬಿದೆಪಿಯು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದು, ನಂತರ ಪ್ರತಿಭಟನಾ ಪ್ರದರ್ಶನ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ, ಪಕ್ಷಪಾತತನದಿಂದ ವರ್ತಿಸುತ್ತಿರುವ ಭಾರದ್ವಾಜರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸಂಸದರ ನಿಯೋಗವೊಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿ ಒತ್ತಾಯಿಸಿತ್ತು.