ಭ್ರಷ್ಟಾಚಾರ ಹಗರಣಗಳ ಆರೋಪ ಹೊತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತಮ್ಮ ಕೈ ತಾವೇ ಕತ್ತರಿಸಿಕೊಳ್ಳಬೇಕು ಎಂದಿದ್ದಾರೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಹರದನಹಳ್ಳಿ ದೊಡ್ಡೇಗೌಡ ದೇವೇಗೌಡರು.
ತುರುವೇಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಭ್ರಷ್ಟಾಚಾರದಲ್ಲಿ ತೊಡಗಿದವರ ಕೈ ಕತ್ತರಿಸಬೇಕು ಎಂದು ಈ ಹಿಂದೆ ಯಡಿಯೂರಪ್ಪ ಅವರೇ ಹೇಳಿದ್ದರು. ಇದೀಗ ಅವರ ಹೇಳಿಕೆ ಅವರಿಗೇ ಅನ್ವಯವಾಗುತ್ತದೆ ಎಂದು ಹೇಳಿದರು.
ಬಿಜೆಪಿಯ ಗರ್ವ ಭಂಗ ಮಾಡಬೇಕಿದ್ದರೆ, ಜಾತ್ಯತೀತ ಜನತಾ ದಳವು ವಜ್ರಾಯುಧವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ದೇವೇಗೌಡ ಅಭಿಪ್ರಾಯಪಟ್ಟರು.