ಕರ್ನಾಟಕ ಮುಖ್ಯಮಂತ್ರಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಯಡಿಯೂರಪ್ಪ ಅವರು ದುರ್ಯೋಧನನಿದ್ದಂತೆ ಎಂದು ಟೀಕಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಭ್ರಷ್ಟಾಚಾರದಿಂದಾಗಿ ಬಿಜೆಪಿಯೇ ನಿರ್ಮೂಲನೆಯಾಗುತ್ತದೆ ಎಂದು ಹೇಳಿದ್ದಾರೆ.
ತಮ್ಮ ವಿರುದ್ಧವೂ ಭೂಹಗರಣದ ಕುರಿತು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂಬ ಯಡಿಯೂರಪ್ಪ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ತಾವೇನೂ ತಪ್ಪು ಮಾಡಿಲ್ಲ, ಯಾವುದೇ ತನಿಖೆಗೂ ಸಿದ್ಧವಿರುವುದಾಗಿ ಘೋಷಿಸಿದರು.