ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರಕಾರದ ಪತನಕ್ಕೆ ಗವರ್ನರ್ ನಿರಂತರ ಸಂಚು: ರೆಡ್ಡಿ (Bharadwaj | BJP | Congress | Janardana Reddy | JDS)
Bookmark and Share Feedback Print
 
ರಾಜ್ಯಪಾಲರು ಕಾಂಗ್ರೆಸ್ ಮುಖಂಡರಂತೆ ವರ್ತಿಸುವುದನ್ನು ಕೈಬಿಟ್ಟು ಸಂವಿಧಾನಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಂದಾಯ ಸಚಿವ ಕರುಣಾಕರ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕೆಲಸ ಮಾಡದೆ ಪಕ್ಷದ ಕಾರ್ಯಕರ್ತರಂತೆ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಬಿಜೆಪಿ ಹಿರಿಯ ಮುಖಂಡರು ರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯಪಾಲರು ಸರಕಾರದ ಪತನಕ್ಕೆ ನಿರಂತರ ಪ್ರಯತ್ನ ನಡೆಸಿದ್ದಾರೆ. ಇಂತಹ ವ್ಯಕ್ತಿಯಿಂದ ಸಂವಿಧಾನ ರಕ್ಷಣೆ ಸಾಧ್ಯವಿಲ್ಲ. ಕೂಡಲೇ ಇವರನ್ನು ಕೇಂದ್ರಕ್ಕೆ ಮರಳಿ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯಪಾಲರ ಧೋರಣೆ ಖಂಡಿಸಿ ಸ್ವಪ್ರೇರಣೆಯಿಂದ ಸಾರ್ವಜನಿಕರು ಬಂದ್ ಮಾಡಿದ್ದಾರೆ. ಅದರಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದಾರೆ. ಬಿಜೆಪಿಯಾಗಲಿ, ಸರಕಾರವಾಗಲಿ ಬಂದ್ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ರೈತರ ಹಿತರಕ್ಷಣೆ ದೃಷ್ಟಿಯಿಂದ ಕಂದಾಯ ಇಲಾಖೆಯಿಂದ ಹಕ್ಕು ಬದಲಾವಣೆ ಪ್ರಕ್ರಿಯೆ ಕುರಿತ ಮಾಹಿತಿಯನ್ನು ರೈತರಿಗೆ ಎಸ್ಎಂಎಸ್ ಮೂಲಕ ನೀಡುವ ಕಾರ್ಯಕ್ರಮವನ್ನು ಫೆಬ್ರುವರಿ 5ರಂದು ಮೊದಲ ಬಾರಿ ಚಿತ್ರದುರ್ಗದಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ