ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚರ್ಚ್ ದಾಳಿ ಬಗ್ಗೆ ಸಿಬಿಐ ತನಿಖೆ ಅನಿವಾರ್ಯ: ಮೊಯ್ಲಿ (Sangh Parivar | Church attacks | B K Somasekhara Commission | Yeddyurappa)
ರಾಜ್ಯದ ವಿವಿಧೆಡೆ ನಡೆದ ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಕೋರರನ್ನು ಗುರುತಿಸುವಲ್ಲಿ ನ್ಯಾ.ಸೋಮಶೇಖರ ನೇತೃತ್ವದ ಆಯೋಗ ವಿಫಲವಾಗಿದೆ ಎಂದು ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಚರ್ಚ್ ದಾಳಿ ಕುರಿತಂತೆ ಶುಕ್ರವಾರ ಆಯೋಗ ಅಂತಿಮ ತನಿಖಾ ವರದಿಯನ್ನು ಸರಕಾರಕ್ಕೆ ಸಲ್ಲಿಸಿತ್ತು. ಈ ಬಗ್ಗೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಧ್ಯಂತರ ವರದಿ ಮತ್ತು ಅಂತಿಮ ವರದಿಗಳು ಭಿನ್ನವಾಗಿದೆ. ಹಾಗಾಗಿ ಸರಕಾರ ಎರಡೂ ವರದಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ಅಲ್ಲದೇ ಚರ್ಚ್ ದಾಳಿ ಕುರಿತಂತೆ ನ್ಯಾಯಮೂರ್ತಿಗಳು ನ್ಯಾಯ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಮೊಯ್ಲಿ, ವರದಿಯಲ್ಲಿನ ಅಂಶಗಳ ಬಗ್ಗೆ ಸಿಬಿಐ ತನಿಖೆ ನಡೆಸುವುದು ಅನಿವಾರ್ಯ ಎಂದರು.

ಆಯೋಗ ಚರ್ಚ್ ಮೇಲೆ ದಾಳಿ ನಡೆಸಿದವರನ್ನು ಪತ್ತೆ ಹಚ್ಚಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಸಿಬಿಐ ತನಿಖೆಯಾಗಬೇಕು. ಇಂತಹ ಘಟನೆಗಳು ನಡೆಯದಂತೆ ತಡೆಯಲು ಕೋಮುವಾದಿ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಹೇಳಿದರು.
ಸಂಬಂಧಿತ ಲೇಖನಗಳು