ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಕ್ಷೇತರರ ಅನರ್ಹತೆ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್ (High court | Indipendent MLA | BJP | Speakar | Yeddyurappa)
NRB
ಐವರು ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿರುವ ಹೈಕೋರ್ಟ್ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಪಕ್ಷೇತರ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಡಿ.ಸುಧಾಕರ್, ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅರ್ಜಿಯ ವಾದ-ಪ್ರತಿವಾದ ಮಂಗಳವಾರ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ್, ಎಸ್ ಅಬ್ದುಲ್ ನಜೀರ್ ಹಾಗೂ ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ಪೂರ್ಣಪೀಠ ತೀರ್ಪನ್ನು ಕಾಯ್ದಿರಿಸಿತು.

ಐವರು ಶಾಸಕರನ್ನು ಯಾವ ಆಧಾರದ ಮೇಲೆ ಅನರ್ಹಗೊಳಿಸಲಾಗಿದೆ ಎಂಬುದನ್ನು ನ್ಯಾಯಮೂರ್ತಿಗಳು ತಿಳಿಯಬಯಸಿದ ಹಿನ್ನೆಲೆಯಲ್ಲಿ ಅವರ ನಿರ್ದೇಶನದ ಮೇರೆಗೆ ಸ್ಪೀಕರ್ ಹೊರಡಿಸಿರುವ ಆದೇಶದ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಸರಕಾರಿ ಪರ ವಕೀಲರು ಕೋರ್ಟ್‌ಗೆ ಸಲ್ಲಿಸಿದರು.

ಏತನ್ಮಧ್ಯೆ ಸ್ಪೀಕರ್ ಕೆ.ಜಿ.ಬೋಪಯ್ಯ ಪರವಾಗಿ ವಕೀಲ ಶಶಿಕಾಂತ್ ಅವರು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ದಾಖಲೆ ಹಾಜರಿಗೆ ಹೈಕೋರ್ಟ್ ಆದೇಶಿಸಿರುವುದರ ಬಗ್ಗೆ ಅದರಲ್ಲಿ ಕೆಲವೊಂದು ಆಕ್ಷೇಪಣೆಗಳನ್ನೂ ಸಲ್ಲಿಸಲಾಗಿದೆ. ಈ ರೀತಿ ದಾಖಲೆ ಹಾಜರುಪಡಿಸುವಂತೆ ಹೈಕೋರ್ಟ್ ಸ್ಪೀಕರ್ ಅವರಿಗೆ ನಿರ್ದೇಶಿಸಿರುವ ಘಟನೆ ಹಿಂದೆಂದೂ ನಡೆದಿಲ್ಲ. ಆದರೆ ಹೈಕೋರ್ಟ್ ಆದೇಶಕ್ಕೆ ಗೌರವ ಕೊಡುವ ನೆಲೆಯಲ್ಲಿ ಈ ದಾಖಲೆ ಹಾಜರುಪಡಿಸಲಾಗಿದೆ ಎಂದು ಸ್ಪೀಕರ್ ಆಕ್ಷೇಪಣಾ ಅರ್ಜಿಯಲ್ಲಿ ತಿಳಿಸಲಾಗಿದೆ.

ವಿಚಾರಣೆ ವೇಳೆ ವಾದ ಮಂಡಿಸುವಾಗಲೂ ಸ್ಪೀಕರ್ ಅವರ ಅಧಿಕಾರದ ಬಗ್ಗೆ ವಿವರಿಸಿದ ವಕೀಲರು, ಸ್ಪೀಕರ್ ಅವರು ದೇಶದಲ್ಲಿನ ಯಾವುದೇ ಕೋರ್ಟ್‌ಗಳ ಮುಂದೆ ಹಾಜರಾಗಬಾರದು ಎಂದು ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನದಲ್ಲಿ ನಿರ್ಣಯ ಮಂಡಿಸಲಾಗಿತ್ತು. ಈ ಬಗ್ಗೆ ಪ್ರಮಾಣಪತ್ರವನ್ನೂ ಸಲ್ಲಿಸಲಾಗಿತ್ತು ಎಂದು ಮಾಹಿತಿ ನೀಡಿದರು. ಆದರೂ ಸ್ಪೀಕರ್ ಬೋಪಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಅವರೂ ತಮ್ಮ ವಾದ ಮಂಡಿಸುವುದು ಅನಿವಾರ್ಯ ಎಂದರು.
ಸಂಬಂಧಿತ ಲೇಖನಗಳು