ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾಳೆ ಎಲ್ಲ ಆಸ್ತಿ ವಿವರ ಘೋಷಿಸ್ತೇನೆ: ಯಡಿಯೂರಪ್ಪ (BJP | Yeddyurappa | Congress | Congress | JDS | Land scam)
ಅಕ್ರಮ ಆಸ್ತಿ, ಭೂ ಹಗರಣ ಮಾಡಿರುವುದಾಗಿ ವಿಪಕ್ಷಗಳು ಆರೋಪಿಸುತ್ತಿರುವುದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಭಾನುವಾರ ತನ್ನ ಎಲ್ಲಾ ಆಸ್ತಿಯ ವಿವರವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ವಿಶ್ವಕನ್ನಡದ ಸಮ್ಮೇಳನದ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಚರ್ಚೆ ನಡೆಸಲು ಬೆಳಗಾವಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಹಗರಣ ಮಾಡಿರುವ ಬಗ್ಗೆ ಯಾವುದೇ ದಾಖಲೆ ಇದ್ದರೂ ಅದನ್ನು ಲೋಕಾಯುಕ್ತಕ್ಕೆ ಅಥವಾ ಕೋರ್ಟ್‌ಗೆ ನೀಡಲಿ. ನಾನು ತಕ್ಷಣವೇ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಪುನರುಚ್ಚರಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಅನಾವಶ್ಯಕವಾಗಿ ಗೂಬೆ ಕೂರಿಸುವ ಯತ್ನ ಮಾಡುತ್ತಿರುವುದಾಗಿ ಆರೋಪಿಸಿದ ಅವರು, ನಾಳೆ ಎಲ್ಲ ಆಸ್ತಿ ವಿವರವನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಪ್ರತಿಪಕ್ಷಗಳು ಅಡ್ಡಿಮಾಡುತ್ತಿವೆ. ಆದರೆ ಪ್ರತಿಪಕ್ಷಗಳ ಯಾವುದೇ ಆರೋಪಕ್ಕೆ ಜಗ್ಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಅವರು ತಾನು ಇನ್ನೂ ಹತ್ತು ವರ್ಷಗಳ ಕಾಲ ಆಡಳಿತ ನಡೆಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೂಡ ಸರಕಾರವನ್ನು ಉರುಳಿಸಲು ಪ್ರಯತ್ನ ನಡೆಸುತ್ತಲೇ ಇದ್ದಾರೆಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು. ರಾಜ್ಯಪಾಲರು ತಮ್ಮ ಹುದ್ದೆಗೆ ತಕ್ಕಂತೆ ನಡೆದುಕೊಳ್ಳಬೇಕು. ಆದರೆ ಅವರು ವಿಪಕ್ಷಗಳ ಕೈಗೊಂಬೆಯಂತೆ ವರ್ತಿಸುತ್ತಿರುವುದು ವಿಪರ್ಯಾಸ ಎಂದರು.
ಇವನ್ನೂ ಓದಿ